ಮಂಡ್ಯ

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ದಾವಣಗೆರೆ ಉಪ ಚುಣಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪದಲ್ಲಿ ಅಮಾನತಗೊಂಡ ಅಬ್ದುಲ್ ಜಬ್ಬಾರ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾಗೊಂಡ ನಸೀರ್ ಅಹ್ಮದ್ ಅವರ ವಿಚಾರವಾಗಿ ಅಲ್ಪಸಂಖ್ಯಾತ ಸಮುದಾಯದ ಧಾರ್ಮಿಕ ಮುಖಂಡರು ಕಾಂಗ್ರೆಸ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೈ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಈಗಾಗಲೇ ಪರಿಷತ್ ಸದಸ್ಯರು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರಾದ ಅಬ್ದುಲ್ ಜಬ್ಬಾರ್ ಮತ್ತು ನಜೀರ್ ಅಹ್ಮದ್ ಅವರ ತಲೆದಂಡವಾಗಿದೆ. ಕಾಂಗ್ರೆಸ್ ಪಕ್ಷ ಕೈಗೊಂಡ ಈ ಕ್ರಮ ಇದೀಗ ರಾಜ್ಯ ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರನ್ನು ಕೆರಳುವಂತೆ ಮಾಡಿದೆ. ಅದಕ್ಕೆ ಪೂರಕವಾಗುವಂತೆ ಶನಿವಾರ ಮಂಡ್ಯದಲ್ಲಿ ಮುಸ್ಲಿಂ ಧಾರ್ಮಿಕ ಮುಖಂಡರು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದ್ದಾರೆ.

ಇಂದು ಮಂಡ್ಯದ ಜಾಮಿಯ ಮಸೀದಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮುಸ್ಲಿಂ ಧರ್ಮಗುರುಗಳು, ಮುಸ್ಲಿಂರೆಲ್ಲರೂ ಕಾಂಗ್ರೆಸ್‌ ಪಕ್ಷದ ಪರ ಇದ್ದಾರೆ. ಕಾಂಗ್ರೆಸ್‌ ಪಕ್ಷ ಬಿಟ್ಟು ಎಲ್ಲೂ ಹೋಗಲ್ಲ ಎಂಬ ಭಾವನೆ ಇದೆ. ಹೀಗಾಗಿ ನಮ್ಮನ್ನೆ ಕೇವಲವಾಗಿ ನೋಡಲಾಗಿದೆ. ಆದರೆ, ನಮಗೆ ಬೇರೆ ಪಕ್ಷದ ಆಯ್ಕೆಯೂ ಇದೆ ಎಂದು ಕೈ ವರಿಷ್ಟರು ಮತ್ತು ನಾಯಕರಿಗೆ ತಿಳಿದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಮುಸ್ಲಿಂ ಸಮುದಾಯ ಕಾರಣ. ಆದರೂ ನಾವು ಅದನ್ನ ಹೇಳಲು ಹೋಗಲ್ಲ. ನಮ್ಮ ಧರ್ಮದವರು ಶೇ.91ರಷ್ಟು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. ನೀವು ಅಧಿಕಾರಕ್ಕೆ ಬರಲು ನಾವು ಕಾರಣಕರ್ತರಾಗಿದ್ದೇವೆ. ಹಗಲಿರುಳು ನಮ್ಮ ಮುಸ್ಲಿಂರು ನಿಮ್ಮ ಪಕ್ಷದ ಪರ ಕೆಲಸ ಮಾಡಿದ್ದೇವೆ. ಆದರೂ ನಮಗೆ ಒಂದು ಗ್ಲಾಸ್ ನೀರು ಕೊಡಲು ಹಿಂದೇಟು ಯಾಕೆ? ಎಂದು ಸಿಎಂ ಸಿದ್ದರಾಮಯ್ಯಗೆ ಮುಸ್ಲಿಂ ಧರ್ಮ ಗುರುಗಳ ಪ್ರಶ್ನೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಹಿಂದಿನಿಂದ ಶಾಮನೂರು ಶಿವಶಂಕರಪ್ಪರನ್ನ ಗೆಲ್ಲಿಸಿಕೊಂಡು ಬಂದಿದ್ದೇವೆ. ಈ ಬಾರಿ ನಮಗೊಂದು ಅವಕಾಶ ಕೊಡಿ ಅಂತಾ ಕೇಳಿದ್ದು ತಪ್ಪ? ಮಲ್ಲಿಕಾರ್ಜುನ ಶಾಸಕರಾಗಿ ಸಚಿವರಾಗಿದ್ದಾರೆ, ಪ್ರಭಾ ಸಂಸದರಾಗಿದ್ದಾರೆ.

ಸಮರ್ಥ್ ಗೆ ಇನ್ನೂ ವಯಸ್ಸು ಇತ್ತು. ಮುಂದಿನ ಬಾರಿ ಅವಕಾಶ ಕೊಡ್ತೀವಿ ಎಂದು ಹೇಳಬಹುದಿತ್ತು. ನಾವು ಯಾವತ್ತೂ ಸಚಿವ ಸ್ಥಾನ ಕೊಡಿ ಅಂತ ಕೇಳಿಲ್ಲ. ಬದಲಾಗಿ ಟಿಕೆಟ್‌ ನೀಡಿ ಎಂದು ಕೇಳಿದ್ದೇ ತಪ್ಪಾ? ಪ್ರಣಾಳಿಕೆಯಲ್ಲಿ ಮುಸ್ಲಿಂರಿಗೆ ಸಾಕಷ್ಟು ಭರವಸೆ ಕೊಟ್ಟಿದ್ದೀರಿ. ನೀವು ನಮ್ಮನ್ನ ಬೇಕಾದಂಗೆ, ಬೇಕಾದಾಗ ಬಳಸಿಕೊಂಡ್ರಿ, ಇವಾಗ ನಡು ನೀರಿನಲ್ಲಿ ಕೈಬಿಟ್ಟಿದ್ದೀರಿ. ಒಂದು ನೋಟೀಸ್ ಕೂಡ ಕೊಡದೆ ಈ ರೀತಿಯ ಕ್ರಮ ಎಷ್ಟು ಸರಿ. ಆತುರಾತುರವಾಗಿ ಈ ರೀತಿಯ ಕ್ರಮ ತೆಗೆದುಕೊಂಡಿರುವುದೇ ಗೊತ್ತಾಗುತ್ತೆ ನಮ್ಮನ್ನ ಎಷ್ಟು ನಿರ್ಲಕ್ಷ್ಯ ಮಾಡ್ತಿದ್ದೀರಿ ಎಂದು ಖಾರವಾಗಿಯೇ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ಹೊರಹಾಕಿದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago