Mysore
22
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ ನೆರವಾಗುತ್ತದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ವ್ಯಾಪ್ತಿಯ 8 ನಗರ ಸ್ಥಳೀಯ ಸಂಸ್ಥೆಗಳ ಸಾಂಪ್ರದಾಯಿಕ ಬೀದಿ ದೀಪಗಳಿಂದ ಎಲ್‌ಇಡಿ ಬೀದಿ ದೀಪಗಳಿಗೆ ಬದಲಾಯಿಸಿ ಮಿತವ್ಯಯ ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕುಮಾರ ಅವರು ಹೇಳಿದರು.

ಇಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಲಿ ಇರುವ ಬೀದಿ ದೀಪಗಳನ್ನು ಬದಲಾಯಿಸಿ ಸಾಂಪ್ರದಾಯಿಕ ಇಂಧನ ಕ್ಷಮತೆಯ ಎಲ್‌ಇಡಿ ದೀಪಗಳನ್ನು ಕೇಂದ್ರೀಕೃತ ಚಾಲನೆ ಮತ್ತು ನಿರ್ವಹಣೆ ಯೋಜನೆ ಸಂಬಂಧ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗಿ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ ನೆರವಾಗುತ್ತದೆ ಎಂದು ತಿಳಿಸಿದರು.

 

Tags:
error: Content is protected !!