ಮಂಡ್ಯ: ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಅಪಘಾತ ವಲಯಗಳಲ್ಲಿ ಸಂಚಾರಿ ಸೂಚನಾ ಪಲಕಗಳನ್ನು ಅಳವಡಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಇಂದು (ಜೂ.14) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಸ್ತೆ ಸುರಕ್ಷತಾ ಸಮಿತಿಯಲ್ಲಿ ಇರುವ 15 ಲಕ್ಷ ರೂ ಅನುದಾನದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟ್ರಫಿಕ್ ಸಿಗ್ನಲ್ ಸರಿಪಡಿಸುವ ಕೆಲಸಗಳು, ಬ್ಲ್ಯಾಕ್ ಸ್ಪಟ್ ಗಳ ಬಳಿ ಸೂಚನಾ ಫಲಕಗಳು, ಹಂಪ್ ಗಳು ಸೇರಿದಂತೆ ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿರುವ ಬ್ಲ್ಯಾಕ್ ಸ್ಪಟ್ ಗಳನ್ನು ಗುರುತಿಸಿ ಅಪಘಾತ ತಡೆಗಟ್ಟಲು ಕೈಗೊಳ್ಳಬೇಕಿರುವ ಕ್ರಮ ಹಾಗೂ ಅದಕ್ಕೆ ತಗಲುವ ವೆಚ್ಚದ ವಿವರವನ್ನು ನಿಗದಿತ ನಮೂನೆಯಲ್ಲಿ ಸಿದ್ಧಪಡಿಸಿ ಅನುದಾನ ಕೋರಿ ಪ್ರಸ್ತಾವನೆಯನ್ನು ಕಳುಹಿಸಿಕೊಡುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಜು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…