ಮಂಡ್ಯ

ಸಿಎಂಗೆ ನಿಂದನೆ : ಬಸರಾಳು ಬಂದ್ ಸಂಪೂರ್ಣ ಯಶಸ್ವಿ

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುರುಬ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ನಿಂದಿಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕುರುಬರ ಸಂಘ, ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಬುಧವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಬಂದ್ ಹಿನ್ನೆಲೆಯಲ್ಲಿ ಬಸರಾಳು ಗ್ರಾಮದ ವರ್ತಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಸಹಕರಿಸಿದರು. ಬಸರಾಳು ಬಂದ್ ಹಾಗೂ ಪ್ರತಿಭಟನೆಯಿಂದಾಗಿ ನಾಗಮಂಗಲ- ಮಂಡ್ಯ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತವಾಗಿತ್ತು. ಬಸರಾಳು ಕನಕ ಭವನದಿಂದ ಪ್ರಮುಖ ವೃತ್ತದವರೆಗೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜೋಡಿ ಟಗರುಗಳ ಜತೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕಾಂಗ್ರೆಸ್ ಮುಖಂಡ ಕೋಡಿಕೊಪ್ಪಲು ನಾಗೇಶ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಬಸರಾಳು ಹೇಮಾವತಿ ಬಡಾವಣೆಯ ಶಾನುಭೋಗನಹಳ್ಳಿ ಕುಮಾರ್ ಮತ್ತು ಬೆನ್ನಹಟ್ಟಿಯ ಮಹೇಶ್ ಅವರನ್ನು ಬಂಽಸಿ, ಗೂಂಡಾ ಕಾಯ್ದೆಯಡಿ ಶಿಕ್ಷೆ ನೀಡಬೇಕು ಎಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.

ಬೇರೆ ಯಾರೂ ಸಹ ಯಾವ ಜಾತಿಯವರ ಬಗ್ಗೆ ಏನೂ ಮಾತನಾಡಬಾರದು, ಬೇರೆಯವರಿಗೆ ಪಾಠವಾಗುವ ರೀತಿ ಕಾನೂನು ಕ್ರಮ ಜರುಗಿಸಬೇಕು. ಬಸರಾಳು ಗ್ರಾಮದಲ್ಲಿ ಒಕ್ಕಲಿಗರು ಹಾಗೂ ಕುರುಬರು ವಿಶ್ವಾಸದಿಂದ ಇದ್ದೇವೆ. ಅವಹೇಳನಕಾರಿಯಾಗಿ ನಿಂದಿಸಿರುವ ಇಂತಹ ಕಿಡಿಗೇಡಿಗಳ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಕರಡಿ ಕೊಪ್ಪಲು ಕೆ.ಸಿ.ಪುಟ್ಟಸ್ವಾಮಿಗೌಡ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಮಾಜಕ್ಕೂ ನ್ಯಾಯ ಕೊಡುವವರು, ಅವರನ್ನು ಒಕ್ಕಲಿಗರ ವಿರೋಧಿ ಎಂದು ಬಿಂಬಿಸುಲಾಗುತ್ತಿದೆ. ಕುರುಬ ಸಮಾಜದ ಸಂಗೊಳ್ಳಿರಾಯಣ್ಣ, ಕನಕದಾಸರನ್ನು ಭಾವಚಿತ್ರದಲ್ಲಿ ನೋಡಿದ್ದೇವೆ. ಆದರೆ, ಸಿದ್ದರಾಮಯ್ಯ ಅವರನ್ನು ಕುರುಬ ಸಮಾಜ ದೇವರ ರೂಪದಲ್ಲಿ ಕಾಣುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕುಮಾರ್ ಹಾಗೂ ಮಹೇಶ್ ಅವರಿಗೆ ತಕ್ಕ ಶಿಕ್ಷೆ ಆಗಬೇಕು. ಅಲ್ಲದೆ, ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ನಂತರ ಪ್ರತಿಭಟನಾಕಾರರು ಬಸರಾಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಬಂಧಿತ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ತೆರೆಯುವಂತೆ ಒತ್ತಾಯಿಸಿದರಲ್ಲದೆ, ಇಬ್ಬರು ಆರೋಪಿಗಳು ಬಹಿರಂಗ ಕ್ಷಮೆ ಯಾಚಿಸುವಂತೆ ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾ ಪೊಲೀಸ್ ಅಧಿಕ್ಷಕ ಸಿ.ಈ. ತಿಮ್ಮಯ್ಯ ಹಾಗೂ ಗಂಗಾಧರಸ್ವಾಮಿ ಅವರು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಬಂಧಿತ ಆರೋಪಿಗಳ ವಿರುದ್ಧ ಈಗಾಗಲೇ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದಾಗಿ ಮಾಹಿತಿ ನೀಡಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಾಧ್ಯಕ್ಷ ಎಂ.ಎಸ್. ಚಿದಂಬರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಅಪ್ಪಾಜಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಕೆ.ಎಚ್. ನಾಗರಾಜು, ಮುಡಾ ನಿರ್ದೇಶಕ ಎನ್.ದೊಡ್ಡಯ್ಯ, ಸಾತನೂರು ಕೃಷ್ಣ, ರಾಜೇಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಸನ್ನ, ಸಿ.ಎಂ. ದ್ಯಾವಪ್ಪ, ಬಸರಾಳು ಶಂಕರೇಗೌಡ, ರಾಜು, ಸಾವಿತ್ರಮ್ಮ, ಮಹೇಶ್, ಶೈಲೇಂದ್ರ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

15 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

16 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

16 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

17 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

17 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

20 hours ago