ಮಂಡ್ಯ : ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಶೇಖರಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5 ರಿಂದ 17 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಅಧಿಕಾರಿಗಳು ಸಮೀಕ್ಷೆ ನಡಯುವ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿರುತ್ತದೆ. ಇದಕ್ಕಾಗಿ ಏಪ್ರಿಲ್ 28 ರಂದು ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಸುವ ಎನ್ಮುರೇಟರ್ಸ್ (enumerators) ಗೆ ತರಬೇತಿ ನೀಡಲಾಗುವುದು ಎಂದರು.
ಎನ್ಮುರೇಟರ್ಸ್ ಗಳನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಎನ್ಮುರೇಟರ್ಸ್ ಗುಂಪಿನ ಕೆಲಸವನ್ನು ಪರಿಶೀಲಿಸಲು ಮುಖ್ಯ ಶಿಕ್ಷಕರನ್ನು ನೇಮಕ ಮಾಡಬೇಕು. ಮೇ 17 ರ ಸಮೀಕ್ಷೆ ಮುಗಿದ ನಂತರ ಮೇ 19 ರಿಂದ 22 ರವರೆಗೆ ಸ್ಥಳ ನಿಗದಿ ಮಾಡಿ ಶಿಬಿರ ನಡೆಸಲಾಗುವುದು. ಶಿಬಿರದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಸಮೀಕ್ಷೆಯಿಂದ ಬಿಟ್ಟುಹೋಗಿದ್ದಲ್ಲಿ ಸಂಪರ್ಕಿಸಿ ಸಮೀಕ್ಷೆಗೆ ಒಳಗಾಗಲೂ ಅವಕಾಶ ಸಹ ನೀಡಲಾಗಿದೆ ಎಂದರು.
ಏಪ್ರಿಲ್ 25 ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ 28 ರಂದು ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುವುದು. ಕಂಪ್ಯೂಟರ್ ಹಾಗೂ ಸಮೀಕ್ಷೆಯ ಜ್ಞಾನವಿರುವ ಸಿಬ್ಬಂದಿಗಳನ್ನು ನಿಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಉಪವಿಭಾಗಾಧಿಕಾರಿ ಶಿವಮೂರ್ತಿ, ಮಂಡ್ಯ ತಹಶೀಲ್ದಾರ್ ಶಿವಕುಮಾರ್ ಬಿರಾದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾಯಣ್ಣಗೌಡ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಜಮೂರ್ತಿ, ನಗರಸಭೆ ಪೌರಾಯುಕ್ತೆ ಪಂಪಾಶ್ರೀ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…