ಮಂಡ್ಯ: ಜಿಲ್ಲೆಯ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು, 1977ರ ನಿಯಮ 5 ಮತ್ತು 26(2) ಹಾಗೂ 12 (ಎ) (ಬಿ) ಮತ್ತು (ಸಿ)ರನ್ವಯ ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಸದರಿ ಹುದ್ದೆಗೆ ಕರ್ನಾಟಕ ಕಾನೂನು ಅಧಿಕಾರಿಗಳ ನಿಯಮ 26(2)ರನ್ವಯ ಮೂರು ವರ್ಷಗಳ ಅವಧಿಗೆ ಹೊಸದಾಗಿ ನೇಮಕಾತಿ ಮಾಡಲು ಉದ್ದೇಶಿಸಲಾಗಿರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳು 1977ರ ನಿಯಮ 5ರನ್ವಯ ಕನಿಷ್ಠ 07 ವರ್ಷಗಳ ಕಾಲ ವಕೀಲಿ ವೃತ್ತಿಯನ್ನು ಪೂರೈಸಿರಬೇಕು, ಸರ್ಕಾರಿ ಅಥವಾ ಅರೆ ಸರ್ಕಾರಿ/ ನಿಗಮ ಮಂಡಳಿಗಳಲ್ಲಿ ಯಾವುದೇ ಹುದ್ದೆಯನ್ನು ಪಡೆದಿರಬಾರದು. ಸ್ಥಳೀಯ ಸಂಸ್ಥೆಗಳ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಸಲಹೆಗಾರರಾಗಿ ನೇಮಕವಾಗಿರಬಾರದು.
ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಆಗಸ್ಟ್ 22 ರ ಸಂಜೆ 5 ಗಂಟೆಯೊಳಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.