ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್ ನಾರಾಯಣ್ ಕಿಡಿಕಾರಿದ್ದಾರೆ.
ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ ಅವರು, ಗಲಭೆಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಹಾಗೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದನ್ನು ಖಂಡಿಸಿದ್ದಕ್ಕೆ ಕಾಂಗ್ರೆಸ್ ನಾಯಕರು ನಮ್ಮನ್ನು ಕೆಲಸವಿಲ್ಲದವರು ಎನ್ನುತ್ತಿದ್ದಾರೆ. ನಮಗೆ ಕೆಲಸವಿಲ್ಲ ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಾ? ಮಸಾಲೆ ದೋಸೆ ತಿಂತಿದ್ದೀರಾ? ಎಂದು ಪ್ರಶ್ನೆ ಮಾಡಿದರು.
ಕೆಲಸವಿರುವ ಸರ್ಕಾರದ ನಾಯಕರು ಎಲ್ಲಿಲ್ಲಿಗೆ ಹೋಗಿದ್ದಾರೆ? ಒಬ್ಬನೇ ಒಬ್ಬ ಸಚಿವನಾಗಲಿ, ಶಾಸಕನಾಗಲಿ ಮದ್ದೂರಿಗೆ ಬಂದು ಜನರ ಸಂಕಷ್ಟ ಆಲಿಸಿಲಲ್. ಈ ಸರ್ಕಾರ ಸತ್ತು ಹೋಗಿದೆಯಾ? ಬದುಕಿದೆಯಾ? ಎಂದು ಕಿಡಿಕಾರಿದರು.
ಇನ್ನು ಬಹುಮತದಿಂದ ಜನರು ನಿಮ್ಮ ಸರ್ಕಾರ ತಂದು ನಿಮಗೆ ಆಡಳಿತ ಕೊಟ್ಟಿದ್ದಾರೆ. ಅದಕ್ಕಾಗಿಯಾದರೂ ಗೌರವಿಸಿ ಚೆನ್ನಾಗಿ ಆಡಳಿತ ನಡೆಸಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅದನ್ನು ಮೊದಲು ಸರಿಪಡಿಸಿ. ಕೆಲಸವಿರುವ ನೀವು ಏನಾದರೂ ಮಾಡಿ ಎಂದು ರಾಜ್ಯ ಸರ್ಕಾರ ಹಾಗೂ ಸಿಎಂ, ಡಿಸಿಎಂ ವಿರುದ್ಧ ಗುಡುಗಿದರು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…