ಮಂಡ್ಯ

ಬಾಲ್ಯ ವಿವಾಹ ತಲೆತಗ್ಗಿಸುವ ವಿಚಾರ : ನ್ಯಾ. ಎಂ.ಆನಂದ್ ಬೇಸರ

ಮಂಡ್ಯ : 21ನೇ ಶತಮಾನದಲ್ಲಿಯೂ ಬಾಲ್ಯ ವಿವಾಹ ನಡೆಯುತ್ತಿದೆ ಎಂದರೆ ಎಲ್ಲರೂ ತಲೆ ತಗ್ಗಿಸುವ ವಿಚಾರವಾಗಿದೆ. ಜಿಲ್ಲೆಯಲ್ಲಿ ಭ್ರೂಣ ಹತ್ಯೆ, ಅಪ್ರಾಪ್ತ ವಯಸ್ಸಿನ ಗರ್ಭಿಣಿ ಹಾಗೂ ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಾಗಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧಿಶ ಎಂ.ಆನಂದ್ ಹೇಳಿದರು.

ತಾಲ್ಲೂಕಿನ ಸಿದ್ದಯ್ಯನಕೊಪ್ಪಲು ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಅವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಬೆಂಗಳೂರು), ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್‌ನ ಸಹಯೋಗದಲ್ಲಿ ನಡೆದ ಬಾಲ್ಯ ವಿವಾಹ ಮುಕ್ತ ಜಿಲ್ಲೆ ಘೋಷಣೆ ಅಂಗವಾಗಿ ಮಕ್ಕಳ ಕಾನೂನುಗಳ ಹಾಗೂ ಮಕ್ಕಳ ಸುರಕ್ಷತೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಲ್ಲಿ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಬಾಲ್ಯ ವಿವಾಹ ಮಾಡುವುದು ನಿಲ್ಲಬೇಕು ಎಂದರು. ಮಕ್ಕಳು ಆಟ ಆಡುವ ವಯಸ್ಸಿನಲ್ಲಿ ಮದುವೆ ಮಾಡುವುದು ಏಕೆ? ಭವಿಷ್ಯ ರೂಪಿಸಿಕೊಳ್ಳುವ ಕಡೆ ಗಮನಹರಿಸಬೇಕು, ಮಕ್ಕಳಿಗೆ ಸಹಾಯ ಮಾಡುವುದನ್ನು ಬಿಟ್ಟು ಬಾಲ್ಯ ವಿವಾಹವೆಂಬ ಪಿಡುಗಿಗೆ ದೂಡುವುದನ್ನು ಸಂಪೂರ್ಣವಾಗಿ ವಿರೋಧಿಸುವ ಮೂಲಕ ಎಚ್ಚರಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಯಾರೇ ಬಾಲ್ಯ ವಿವಾಹ ಮಾಡಿದರೆ ಮತ್ತು ಅದನ್ನು ಪ್ರೋತ್ಸಾಹಿಸಿದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬಹುದು ಎಂಬುದು ಕಾನೂನಿನಲ್ಲಿ ಇದೆ ಎನ್ನುವುದನ್ನು ಅರ್ಥ ಮಾಡಿಸಬೇಕು. ಈ ಸಂಬಂಧ ಅಧಿಕಾರಿಗಳು ಸಾರ್ವಜನಿಕರಿಗೆ ತಿಳಿಸುವ ಕೆಲಸವನ್ನು ತುರ್ತಾಗಿ ಮಾಡಬೇಕು ಎಂದು ಹೇಳಿದರು.

ಅಪರ ಪೊಲೀಸ್ ವರಿಷ್ಠಾಧಿಕಾರಿ ಗಂಗಾಂಧರಸ್ವಾಮಿ ಮಾತನಾಡಿ, ಮಕ್ಕಳಿಗೆ ಒಂದು ಮಗುವಾದರೆ ಅದನ್ನು ಬೆಳೆಸುವ ಪರಿ ಹೇಗಿರುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ವಿವಾಹ ಮಾಡಲು ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ ಇರಬೇಕೆಂಬುದು ಇದೆ. ಆದರೆ, ಇದನ್ನು ಬದಲಿಸಬೇಕೆನ್ನುವ ಅಭಿಪ್ರಾಯವಿದೆ. ಕಲಿಯುವ ವಯಸ್ಸಿನಲ್ಲಿ ಮದುವೆ ಸಂಕೋಲೆಯನ್ನು ತೊಡಿಸುವುದು ಬೇಡ ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಮಿಕ್ಕೆರೆ ವೆಂಕಟೇಶ್ ಮಾತನಾಡಿ, ಬಾಲ್ಯ ವಿವಾಹ ಮುಕ್ತ ಮಾಡಲು ಶಾಲಾ ಹಂತದಲ್ಲಿಯೇ ಪ್ರಯತ್ನ ಪಡಬೇಕು. ಬಾಲ್ಯ ವಿವಾಹ ಎಂಬುದು ದೊಡ್ಡ ಪಿಡುಗಾಗಿದೆ. ಇದರಿಂದ ಪೋಷಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ(ದಕ್ಷಿಣ ವಲಯ)ಮಹದೇವು, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ರಿಪಬ್ಲಿಕ್ ಸೆಂಟ್ರಲ್ ಸ್ಕೂಲ್ ಕಾರ್ಯದರ್ಶಿ ಮಂಜುನಾಥ್, ಪ್ರಾಂಶುಪಾಲರಾದ ಸುನೀತಾ, ಕಾರ್ಯಕ್ರಮ ಸಂಯೋಜನಾಧಿಕಾರಿ ರಾಜೇಂದ್ರ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೆಆರ್‌ಎಸ್‌ ಹಿನ್ನೀರಿನಲ್ಲಿ ಒತ್ತುವರಿ ತೆರವಿಗೆ ಸರ್ವೆ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕೆಆರ್‌ಎಸ್‌ ಅಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಒತ್ತುವರಿಯನ್ನು ತೆರವುಗೊಳಿಸಲು ಕೂಡಲೇ ಸರ್ವೆ ಕಾರ್ಯ ಪ್ರಾರಂಭಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರ…

10 mins ago

ಬಳ್ಳಾರಿ ಬ್ಯಾನರ್‌ ಗಲಾಟೆ ಪ್ರಕರಣ: ಐಜಿ ವರ್ತಿಕಾ ಕಟಿಯಾರ್‌ ತಲೆದಂಡ

ಬಳ್ಳಾರಿ: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಬ್ಯಾನರ್‌ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ…

36 mins ago

ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ದೇವರಾಜ ಅರಸು ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ ಎಂದು ಮಾಜಿ…

2 hours ago

ಪಿರಿಯಾಪಟ್ಟಣ| 10 ಲಕ್ಷ ಮೌಲ್ಯದ ಅಡಿಕೆ ದೋಚಿದ ಖದೀಮರು

ಪಿರಿಯಾಪಟ್ಟಣ: ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಖದೀಮರು 10 ಲಕ್ಷ ಮೌಲ್ಯದ ಅಡಿಕೆಯನ್ನು ಕಳ್ಳತನ ಮಾಡಿದ್ದು, ಟಿಬೆಟಿಯನ್‌ ರೈತರೊಬ್ಬರು ಕಂಗಾಲಾಗಿದ್ದಾರೆ. ಬೈಲಕುಪ್ಪೆಯ ತಿರುಮಲಾಪುರ…

2 hours ago

ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ರಶ್ಮಿಕಾ ಮಂದಣ್ಣ ನಂಬರ್.‌1

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಆದಾಯ ತೆರಿಗೆ ಪಾವತಿದಾರರಲ್ಲಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮೊದಲ ಸ್ಥಾನದಲ್ಲಿದ್ದಾರೆ. ಕಿರಿಕ್‌ ಪಾರ್ಟಿ ಮೂಲಕ…

2 hours ago

ಸಾಕ್ಷ್ಯ ಸಿಗಬಾರದೆಂದು ಮೃತ ರಾಜಶೇಖರ್‌ ದೇಹ ಸುಟ್ಟಿದ್ದಾರೆ: ಶ್ರೀರಾಮುಲು ಗಂಭೀರ ಆರೋಪ

ಬಳ್ಳಾರಿ: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಪ್ರಕರಣ ಕುರಿತು ಮಾತನಾಡಿದ ಮಾಜಿ…

3 hours ago