ಮಂಡ್ಯ

ಸಿರಿ ಧಾನ್ಯಗಳ ಬಗ್ಗೆ ಮುಂದಿನ ಪೀಳಿಗೆಗೆ ತಿಳಿಸುವುದು ಆದ್ಯ ಕರ್ತವ್ಯ: ಕೆ.ಆರ್.‌ನಂದಿನಿ

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ ಹೇಳಿದರು.

ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್‌ ಶೋ ಮೂಲಕ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಂಬಂಧ ಆಯೋಜಿಸಲಾಗಿದ್ದ ಸಿರಿಧಾನ್ಯ ರೋಡ್‌ ಶೋ ಕಾರ್ಯಕ್ರಮವನ್ನು ಹಸಿರು ಬಾವುಟ ಹಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಹೆಣ್ಣು ಮಕ್ಕಳು ಸಿರಿಧಾನ್ಯಗಳನ್ನು ಬಳಸಿ ಆರೋಗ್ಯಕರವಾದ ಪೌಷ್ಠಿಕತೆ ಹೆಚ್ಚಿಸುವ ಶುಚಿಯಾದ ರುಚಿಕರವಾದ ಅಡುಗೆ ತಯಾರಿಸಬಹುದು ಎಂಬ ಪ್ರಯತ್ನ ನಡೆಯುತ್ತಿದೆ. ಹೊಸ ವರ್ಷಕ್ಕೆ ಸಿಹಿ ಹಂಚುವುದು ಪದ್ಧತಿ. ಆ ದೃಷ್ಟಿಯಿಂದ ಮಂಡ್ಯ ಜಿಲ್ಲಾ ಪಂಚಾಯತ್‌, ರಾಷ್ಟ್ರೀಯ ಜೀವನೋಪಾಯ ವಿಷನ್‌, ಕೃಷಿ ಇಲಾಖೆ ಒಟ್ಟುಗೂಡಿ ಸಾರ್ವಜನಿಕರಿಗೆ ಸೇರಬೇಕು ಎಂಬ ಯೋಚನೆಯಿಂದ ವಿಭಿನ್ನ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಮಂಡ್ಯ ಜಿಲ್ಲೆ ನೈಸರ್ಗಿಕ ಕೃಷಿ ಪದ್ಧತಿಯತ್ತ ಹೋದಾಗ ಮಾತ್ರ ನಾವು ಸುಸ್ಥಿರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೋವಿಡ್‌ ಹಗರಣ: ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್‌…

20 mins ago

ಚಾಮುಂಡಿಬೆಟ್ಟಕ್ಕೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಭೇಟಿ

ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…

47 mins ago

ಹೊಸ ವರ್ಷದ ಸಂಭ್ರಮ: ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತಸಾಗರ

ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…

1 hour ago

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…

2 hours ago

ಹೊಸ ವರ್ಷದ ಸಂಭ್ರಮ: ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಲಡ್ಡು ವಿತರಣೆ

ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…

2 hours ago

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…

2 hours ago