ಮಂಡ್ಯ

ಬಸವಣ್ಣನವರ ಆರಾಧನೆಗಿಂತ ಅವರ ಆಶಯ ಪಾಲಿಸುವುದು ಅತ್ಯಗತ್ಯ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಪ್ರಸ್ತುತ ಸನ್ನಿವೇಶದಲ್ಲಿ ಬಸವಣ್ಣನವರ ವಚನ ಸಂದೇಶಗಳು ವಿಶ್ವದ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸೂಚಿಸುವಂತಿವೆ. ಹಾಗಾಗಿ ಎಲ್ಲರೂ ಬಸವಣ್ಣನವರನ್ನು ಆರಾಧಿಸುವುದಕ್ಕಿಂತ ಅವರ ವಚನ ಸಂದೇಶಗಳನ್ನು ಪಾಲಿಸುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಇಂದು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಕಲಾಮಂದಿರದಲ್ಲಿ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿಗೇ ಜ್ಞಾನದ ಜ್ಯೋತಿ ಬೆಳಗಿಸಿದ ಬಸವಣ್ಣನವರನ್ನು ಪೂಜಿಸುವುದರಿಂದ ಅವರ ಸಂದೇಶವನ್ನೇ ಮರೆಮಾಚಿದಂತಾಗುತ್ತದೆ. ಹಾಗಾಗಿ ಬಸವಣ್ಣನವರ ಆರಾಧನೆಗಿಂತ ಅವರು ತಮ್ಮ ವಚನಗಳ ಮೂಲಕ ನೀಡಿರುವ ಸಂದೇಶಗಳನ್ನು ಅರಿತುಕೊಳ್ಳುವುದು ಮುಖ್ಯ ಎಂದರು.

ಮುಂದಿನ ಪೀಳಿಗೆಯ ಸಮ ಸಮಾಜದಲ್ಲಿ ನೆಮ್ಮದಿಯಿಂದಿರಬೇಕಾದರೆ, ಮಕ್ಕಳಿಗೆ ಬಸವ ತತ್ವಗಳ ಸಾರವನ್ನು ತಿಳಿಸಬೇಕಿದೆ. ಮಕ್ಕಳಿಗೆ ತಿಳಿಸಬೇಕೆಂದರೆ ಮೊದಲು ನಾವು ವಚನಗಳ ಆಶಯಗಳನ್ನು ಅರಿತುಕೊಳ್ಳಬೇಕು, ಬಳಿಕ ಮಕ್ಕಳಿಗೆ ಮನಮುಟ್ಟುವಂತೆ ತಿಳಿಸಿದರೆ ಅವರು ಗ್ರಹಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬಸವಣ್ಣನವರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಅಪೂರ್ವವಾದ ಕೊಡುಗೆ ನೀಡಿದ್ದಾರೆ. ಬಸವಣ್ಣನವರ ಸುಮಾರು 1500 ಕ್ಕೂ ಹೆಚ್ಚು ವಚನಗಳನ್ನು ಸಂಗ್ರಹ ಮಾಡಲಾಗಿದೆ. ಸಮಾನತೆ ಇರಬೇಕು ಎಂದು ಬಯಸಿದ್ದ ಬಸವಣ್ಣ ತಮ್ಮ ಕಾವ್ಯದ ಮೂಲಕ ಸಾಮಾಜಿಕ ಜಾಗೃತಿಯನ್ನು ಹರಡಿದರು ಎಂದರು.

ಮುಖ್ಯವಾಗಿ ಲಿಂಗ ಅಥವಾ ಸಾಮಾಜಿಕ ತಾರತಮ್ಯ, ಮೂಢ ನಂಬಿಕೆಗಳು ಮತ್ತು ಆಚರಣೆಗಳನ್ನು ತಿರಸ್ಕರಿಸಿದ್ದರು. ದೇವರು ಬೇರೆ ಎಲ್ಲಿಯೂ ಇಲ್ಲ ಅವನು ನಮ್ಮೊಳಗೆ ಇದ್ದಾನೆ ಎಂದು ಬಸವಣ್ಣ ನಂಬಿದ್ದರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬೇಬಿ ಬೆಟ್ಟದ ಶ್ರೀರಾಮಯೋಗೀಶ್ವರ ಮಠದ ಪೀಠಾಧ್ಯಕ್ಷ ಶಿವಬಸವ ಸ್ವಾಮೀಜಿ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ, ಕಾಯಕಯೋಗಿ ಫೌಂಡೇಶನ್ ಅಧ್ಯಕ್ಷ ಎಂ.ಶಿವಕುಮಾರ್, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಎಲ್.ಸಂದೇಶ್, ಮುಖಂಡರಾದ ಸುಂಡಹಳ್ಳಿ ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ.ನಂದೀಶ್ ಮತ್ತಿತರರಿದ್ದರು.

 

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

5 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

18 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

19 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

19 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

19 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

19 hours ago