ಮಂಡ್ಯ

ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ಸಮಾಜಕ್ಕೆ ಶೋಭೆಯಲ್ಲ : ಜಿಲ್ಲಾಧಿಕಾರಿ ಕುಮಾರ

ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ

ಮಂಡ್ಯ : ಅಸ್ಪೃಶ್ಯತೆ ಒಂದು ಸಾಮಾಜಿಕ ಪಿಡುಗು. ನಮ್ಮ ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಜೀವಂತವಾಗಿರುವುದು ನಾಗರಿಕ ಸಮಾಜಕ್ಕೆ ಶೋಭೆಯಲ್ಲ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯನ್ವಯ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಸದಸ್ಯರನ್ನು ಒಳಗೊಂಡಂತೆ ಅಸ್ಪೃಶ್ಯತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಸೂಚಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚಾದರೆ ಏನೇನು ಸಮಸ್ಯೆ ಉಂಟಾಗುತ್ತದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಕಾನೂನು ಅರಿವು ಕಾರ್ಯಕ್ರಮಗಳನ್ನು ರೂಪಿಸಿ ಎಂದರು.

ದೌರ್ಜನ್ಯ ಪ್ರಕರಣಗಳು ಸಂಭವಿಸಿದ ಸಂದರ್ಭದಲ್ಲಿ ಯಾವುದೇ ವಿಳಂಬ ಮಾಡದೆ ಸಂಬಂಧ ಪಟ್ಟ ಇಲಾಖೆಯ ಎಲ್ಲಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ದೌರ್ಜನ್ಯಕ್ಕೊಳಗಾದ ವ್ಯಕ್ತಿಯ ಸಂಬಂಧ ಪಟ್ಟ ವಾರಸುದಾರರ ದಾಖಲೆಗಳನ್ನು ಪಡೆದು ಕೂಡಲೇ ಪರಿಹಾರವನ್ನು ಕೊಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

ಎಲ್ಲ ತಹಸಿಲ್ದಾರ್‌ಗಳು ತಮ್ಮ ತಾಲ್ಲೂಕುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕುರಿತು ಜಾಗೃತಿ ಸಮಿತಿ ಸಭೆ ಹಾಗೂ ಕುಂದು ಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಮಾಡಬೇಕು. ತಾಲ್ಲೂಕು ಮಟ್ಟದಲ್ಲಿ ಸಮರ್ಪಕವಾಗಿ ಕುಂದು ಕೊರತೆಗಳ ಸಭೆ ಆಯೋಜನೆ ಮಾಡುವುದು ಸಂಬಂಧಪಟ್ಟ ಇಲಾಖೆಯ ಸಹಾಯಕ ನಿರ್ದೇಶಕರ ಜವಾಬ್ದಾರಿಯಾಗಿದೆ ಎಂದು ಎಚ್ಚರಿಸಿದರು.

ಜಾತಿ ಕುರಿತು ಇನ್ನೂ ಸಹ ಇರುವ ಅಸಹನೆಯನ್ನು ನಾಗರಿಕ ಸಮಾಜದಲ್ಲಿರುವ ಪ್ರತಿಯೊಬ್ಬ ನಾಗರಿಕ ಪ್ರಜ್ಞಾವಂತರು ಅದನ್ನು ಖಂಡಿಸುವ ಕೆಲಸ ಮಾಡಬೇಕಿದೆ. ಇಂತಹ ಪ್ರಕರಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳ ತನಿಖೆಯನ್ನು ಸಾಧ್ಯವಾದಷ್ಟು ಬೇಗ ಮುಗಿಸಿ ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ ವ್ಯಕ್ತಿಗಳ ವಾರಸುದಾರರಿಗೆ ನೌಕರಿ ನೀಡುವ ಪ್ರಕ್ರಿಯೆ ಹಾಗೂ ಪಿಂಚಣಿ ನೀಡುವ ಸೌಲಭ್ಯಗಳನ್ನು ಶ್ರೀಘ್ರವಾಗಿ ನಡೆಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು, ಜಗೃತ ಸಮಿತಿ ಸದಸ್ಯರು ಭಾಗವಹಿಸಿದ್ದರು.

 

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

3 mins ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

3 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

4 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

4 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

5 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

5 hours ago