ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆನೇ ಕ್ರಾಂತಿ. ಇನ್ನು ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲವೆಂದು ಬಹುತೇಕ ಶಾಸಕರಲ್ಲಿ ಅಸಮಾಧಾನವಿದೆ. ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ಇದನ್ನು ಓದಿ : ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ನನ್ನನ್ನು ಜನರು ಉಚ್ಚಾಟಿಸಿಲ್ಲ
ನನ್ನನ್ನು ಉಚ್ಚಾಟನೆ ಮಾಡಿದ್ದು ಬಿಜೆಪಿಯೇ ಹೊರತು ಜನರಲ್ಲ. ಹಿಂದೂಗಳ ಮತಗಳ ವಿಭಜನೆ ನನ್ನ ಉದ್ದೇಶವಲ್ಲ. ಒಂದಿಬ್ಬರು ಬಿಜೆಪಿ ಸಂಸದರು ಹೊರತುಪಡಿಸಿ ಉಳಿದವರೆಲ್ಲರೂ ನನ್ನ ಉಚ್ಚಾಟನೆಯನ್ನು ವಿರೋಧಿಸಿದ್ದರು. ಯಡಿಯೂರಪ್ಪ ಕುಟುಂಬದ ಜತೆ ನನ್ನ ಸಂಧಾನವಿಲ್ಲ ಎಂದರು.
ಪ್ರಿಯಾಂಕ್ ಖರ್ಗೆ ಶತಮೂರ್ಖ
ಪ್ರಿಯಾಂಕ ಖರ್ಗೆ ಒಬ್ಬ ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್‌ನ್ನು ನಿಷೇಧಿಸಲಾಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈತ ಏನೇನೋ ಮಾತಾಡ್ತಾನೆ. ಸೂರ್ಯ, ಚಂದ್ರ ಇರೋವರೆಗೂ ಆರ್‌ಎಸ್ಎಸ್ ಇರುತ್ತದೆ. ಸಿದ್ದರಾಮಯ್ಯ ಮಗ ಯತೀಂದ್ರ, ಜತೀಂದ್ರ, ಹರಿಪ್ರಸಾದ್ ಪಾಕಿಸ್ತಾನ್ ಏಜೆಂಟ್ ರೀತಿ ಮಾತಾಡ್ತಾರೆ. ಯತೀಂದ್ರ ಏನು ಮಾತಾಡುತ್ತಾನೆಂದು ಗೊತ್ತಾಗಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.





