ಮಂಡ್ಯ

ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ : ಯತ್ನಾಳ್‌

ಮಂಡ್ಯ : ಮುಖ್ಯಮಂತ್ರಿ ಹುದ್ದೆಯಿಂದ ಸಿದ್ದರಾಮಯ್ಯ ಕೆಳಗಿಳಿಸುವುದು ಸುಲಭವಲ್ಲ. ನವೆಂಬರ್ ಕ್ರಾಂತಿ ಆಗೋದಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಹೆಚ್ಚುತ್ತಿದೆ ಎಂದು ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ನವೆಂಬರ್ ಕ್ರಾಂತಿ ಬಗ್ಗೆ ಏನೂ ಗೊತ್ತಿಲ್ಲ. ಕ್ರಾಂತಿಯಾದರೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷದಲ್ಲಿ ನವೆಂಬರ್ ಕ್ರಾಂತಿ ಆಗಬಹುದು. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆನೇ ಕ್ರಾಂತಿ. ಇನ್ನು ಅಭಿವೃದ್ಧಿಗೆ ಅನುದಾನ ಸಿಗುತ್ತಿಲ್ಲವೆಂದು ಬಹುತೇಕ ಶಾಸಕರಲ್ಲಿ ಅಸಮಾಧಾನವಿದೆ. ಡಿಕೆಶಿಯನ್ನು ಬಿಜೆಪಿಗೆ ಕರೆತಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನು ಓದಿ : ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ

ನನ್ನನ್ನು ಜನರು ಉಚ್ಚಾಟಿಸಿಲ್ಲ
ನನ್ನನ್ನು ಉಚ್ಚಾಟನೆ ಮಾಡಿದ್ದು ಬಿಜೆಪಿಯೇ ಹೊರತು ಜನರಲ್ಲ. ಹಿಂದೂಗಳ ಮತಗಳ ವಿಭಜನೆ ನನ್ನ ಉದ್ದೇಶವಲ್ಲ. ಒಂದಿಬ್ಬರು ಬಿಜೆಪಿ ಸಂಸದರು ಹೊರತುಪಡಿಸಿ ಉಳಿದವರೆಲ್ಲರೂ ನನ್ನ ಉಚ್ಚಾಟನೆಯನ್ನು ವಿರೋಧಿಸಿದ್ದರು. ಯಡಿಯೂರಪ್ಪ ಕುಟುಂಬದ ಜತೆ ನನ್ನ ಸಂಧಾನವಿಲ್ಲ ಎಂದರು.

ಪ್ರಿಯಾಂಕ್ ಖರ್ಗೆ ಶತಮೂರ್ಖ
ಪ್ರಿಯಾಂಕ ಖರ್ಗೆ ಒಬ್ಬ ಶತಮೂರ್ಖ. ನೆಹರೂ, ಇಂದಿರಾ ಗಾಂಧಿಗೆ ಆರ್‌ಎಸ್‌ಎಸ್‌ನ್ನು ನಿಷೇಧಿಸಲಾಗಲಿಲ್ಲ. ಮುಸ್ಲಿಮರನ್ನು ಖುಷಿಪಡಿಸಲು ಈತ ಏನೇನೋ ಮಾತಾಡ್ತಾನೆ. ಸೂರ್ಯ, ಚಂದ್ರ ಇರೋವರೆಗೂ ಆರ್‌ಎಸ್ಎಸ್ ಇರುತ್ತದೆ. ಸಿದ್ದರಾಮಯ್ಯ ಮಗ ಯತೀಂದ್ರ, ಜತೀಂದ್ರ, ಹರಿಪ್ರಸಾದ್ ಪಾಕಿಸ್ತಾನ್ ಏಜೆಂಟ್ ರೀತಿ ಮಾತಾಡ್ತಾರೆ. ಯತೀಂದ್ರ ಏನು ಮಾತಾಡುತ್ತಾನೆಂದು ಗೊತ್ತಾಗಲ್ಲ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago