ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ದಸರಾ ಸಂಭ್ರಮ ಮನೆಮಾಡಿದ್ದು, ನಟ ಶಿವರಾಜ್ ಕುಮಾರ್ ಅವರಿಂದು ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ.
ಪ್ರತಿ ವರ್ಷವೂ ಮಂಡ್ಯ ಜಿಲ್ಲಾಡಳಿತದಿಂದ ಶ್ರೀರಂಗಪಟ್ಟಣ ದಸರಾವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಬಾರಿಯೂ ಇಂದಿನಿಂದ ಅಕ್ಟೋಬರ್.7ರವರೆಗೆ ನಾಲ್ಕು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಇಂದು ಮಧ್ಯಾಹ್ನ ಕಿರಂಗೂರಿನ ಬನ್ನಿ ಮಂಟಪದಿಂದ ಶ್ರೀ ಚಾಮುಂಡೇಶ್ವರಿ ದೇವಿಯ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯಲ್ಲಿ ಮಹೇಂದ್ರ, ಹಿರಣ್ಯ ಹಾಗೂ ಲಕ್ಷ್ಮೀ ಆನೆಗಳು ಇರಲಿವೆ.
ಮಹೇಂದ್ರ ಅಂಬಾರಿ ಹೊರುವ ಆನೆಯಾಗಿದ್ದು, ಹಿರಣ್ಯ ಮತ್ತು ಲಕ್ಷ್ಮೀ ಕುಮ್ಕಿ ಆನೆಗಳಾಗಿವೆ.
ಈ ಬಾರಿ ಶ್ರೀರಂಗಪಟ್ಟಣ ದಸರಾವನ್ನು ಹಿರಿಯ ನಟ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ.