ಮಂಡ್ಯ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಹಿಂದೂಗಳ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಶ್ರೀರಂಗಪಟ್ಟಣದಲ್ಲಿ ಶಾಸಕ ರಮೇಶ್ ಬಾಬು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದೆ ಹತ್ಯಗೆ ಕಾರಣವಾಗಿದೆ. ಆರ್ಟಿಕಲ್ 370 ತೆಗೆಯೋದಕ್ಕು ಮೊದಲು ಬಿಜೆಪಿ ಯೋಚನೆ ಮಾಡಬೇಕಿತ್ತು ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಅವರ ಅತಿಯಾದ ಆತ್ಮವಿಶ್ವಾಸದಿಂದ ಈ ದುರ್ಘಟನೆ ನಡೆದಿದೆ. ಆರ್ಟಿಕಲ್ 370 ತೆಗೆಯುವ ಮುನ್ನಾ ಕಾಶ್ಮಿರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದಿದ್ದಾರೆ.





