ಮಂಡ್ಯ : ಆಗಸ್ಟ್ 5 ಮತ್ತು 6ರಂದು ಮದ್ದೂರು ಹಾಗೂ ಮಂಡ್ಯದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಾಂದೋಲನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್ ತಿಳಿಸಿದರು.
ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ನಡೆಸಿರುವ ಅವ್ಯವಹಾರ ಮತ್ತು ಹಗರಣಗಳನ್ನು ಜನತೆಯ ಮುಂದೆ ಇಡುವ ಜವಾಬ್ದಾರಿಯ ಆಧಾರದ ಮೇಲೆ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು, ಮುಖಂಡರು, ರಾಜ್ಯಮಟ್ಟದ ನಾಯಕರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೇರಿದಂತೆ ಹಲವಾರು ಮಂದಿ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಆಗಸ್ಟ್ ಐದರಂದು ಮದ್ದೂರಿನ ಕ್ರೀಡಾಂಗಣದಲ್ಲಿ ಹಾಗೂ ಆಗಸ್ಟ್ 6 ರಂದು ಮಂಡ್ಯ ನಗರದ ಸರ್ಕಾರಿ ಮಹಿಳಾ ಕಾಲೇಜಿನ ಆವರಣದಲ್ಲಿ ಜನಾಂದೋಲನ ಯಾತ್ರೆ ನಡೆಯಲಿದ್ದು ಆದ ಕಾರಣ ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬಂಧುಗಳು ಹಾಗೂ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ರುದ್ರಪ್ಪ, ಚಿದಂಬರಂ, ಮುಡಾ ಅಧ್ಯಕ್ಷ ನಹೀಂ ಸೇರಿದಂತೆ ಇತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…
ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ…