ಮಂಡ್ಯ

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಪುತ್ರನ ವಿರುದ್ಧ ಅಕ್ರಮ ಆರೋಪ: ದೂರು ನೀಡಿದ ಜೆಡಿಎಸ್‌ ಶಾಸಕ

ಮಂಡ್ಯ: ಅಬಕಾರಿ ಸಚಿವ ಆರ್.‌ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್‌ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ.

ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ ಪುತ್ರನ ವಿರುದ್ಧ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್‌ ಶಾಸಕ ಎಚ್‌.ಟಿ.ಮಂಜು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಿಎಲ್‌-7 ಸನ್ನದು ಮಂಜೂರು ಮಾಡಿಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದಿದ್ದಾರೆ.

ಸಚಿವ ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಶಾಸಕ ಮಂಜು, ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ದೂರು ನೀಡಿದ್ದಾರೆ.

ದೂರು ಆಧರಿಸಿ ಸಿಎಸ್‌ ಪರಿಶೀಲನೆಗೆ ಸೂಚಿಸಿದ್ದಾರೆ. ಅಬಕಾರಿ ಆಯುಕ್ತರಿಗೆ ಪತ್ರ ಬರೆದಿರುವ ಸಿಎಸ್‌ ಶಾಲಿನಿ ರಜನೀಶ್‌, ದೂರಿನ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದಾರೆ. ಅಲ್ಲದೇ ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

2 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

4 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

4 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

5 hours ago