ಮಂಡ್ಯ : ಬಿಜೆಪಿ-ಜೆಡಿಎಸ್‍ಗೆ ಲೋಕಸಭಾ ಚುನಾವಣೆ ಭಯ ಶುರುವಾಗಿದೆ, ಅದಕ್ಕಾಗಿಯೇ ಇಲ್ಲ-ಸಲ್ಲದ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿವೆ. ಅಂತಿಮವಾಗಿ ಅವರಿಗೆ ಇದರಿಂದ ಯಾವುದೇ ಫಲ ಸಿಗುವುದಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರದಲ್ಲಿ ದೊಡ್ಡ ದೊಡ್ಡ ಹಗರಣವಾಗಿದೆ ತನಿಖೆ ಮಾಡಿ ಬಿಲ್ ಕೊಡುತ್ತೇವೆ, ಜೆಡಿಎಸ್-ಬಿಜೆಪಿ ಅವರಿಗೆ ಏನು ಹೇಳುವುದಕ್ಕಾಗಲ್ಲ. ಗ್ಯಾರಂಟಿ ಕೊಟ್ಟಿದ್ದೇವೆ ಅದಕ್ಕೆ ಅವರಿಗೆ ಟೀಕೆ ಮಾಡಲು ಬೇರೆ ವಿಚಾರಗಳು ಸಿಗುತ್ತಿಲ್ಲ, ಆದ್ದರಿಂದ ಸುಳ್ಳು ಪತ್ರ ಬರೆಯುವ ಕೆಲಸ ಮಾಡಿದ್ದಾರೆ, ಆ ಪತ್ರ ನಕಲಿ ಎಂಬುದು ಎಲ್ಲರಿಗೂ ಗೊತ್ತಾಗುತ್ತೆ ಎಂದು ಪ್ರತಿಕ್ರಿಯಿಸಿದರು.
ಬಿಜೆಪಿ ಸರ್ಕಾರದ ಆಡಳಿತದಲ್ಲಿ ದೊಡ್ಡ ದೊಡ್ಡ ಹಗರಣ ಆಗಿದೆ. ತನಿಖೆ ಮಾಡದೆ ಬಿಲ್ ಕೊಡಿ ಅಂದ್ರೆ ಹೇಗೆ? ಎಲ್ಲಾ ತನಿಖೆ ಮಾಡಿ ಕೊಡ್ತಿವಿ ಅಂತ ಹೇಳಿದ್ದೇವೆ ಎಂದರು. ಸರ್ಕಾರಿ ನೌಕರರು ಗಟ್ಟಿಯಾಗಿ ನಿಲ್ಲುತೀರಿ, ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುತ್ತೀರಾ, ಆಗ ಸರ್ಕಾರಕ್ಕೆ ಗೌರವ ಸಿಗುತ್ತೆ. ಜನರಿಗೆ ಕಿರುಕುಳ ಕೊಟ್ಟರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತೆ. ಸರ್ಕಾರದ ಯೋಜನೆ ಕಾರ್ಯಕ್ರಮವನ್ನು ಜನರಿಗೆ ತಲುಪಿಸಿ ಎಂದು ಸಚಿವರು ಸಲಹೆ ನೀಡಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…