ಕೆ.ಆರ್ ಪೇಟೆ: ಹಾಸನದ ಅಶ್ಲೀಲ ವಿಡಿಯೋ ಪ್ರಕರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಶುಕ್ರವಾರ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಶಾಸಕ ಹೆಚ್.ಟಿ ಮಂಜು ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್ ನೇತೃತ್ವದಲ್ಲಿ ಪ್ರವಾಸಿ ಮಂದಿರ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಜೆಡಿಎಸ್ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಶ್ಲೀಲ ವಿಡಿಯೋಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡುವ ಮೂಲಕ ಮಹಿಳೆಯರು ಮಾನ ಹರಾಜು ಹಾಕಿದ್ದಾರೆಂದು ಜೆಡಿಎಸ್ ಕಾರ್ಯಕರ್ತರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡರ ಪ್ರತಿಕೃತಿ ದಹಿಸಿದರು.
ಈ ವೇಳೆ ಮಾತನಾಡಿದ ಶಾಸಕ ಹೆಚ್.ಟಿ ಮಂಜು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಜೆಡಿಎಸ್ ಪಕ್ಷ ಬೆಂಬಲಿಸುವುದಿಲ್ಲ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಆದರೆ ಆಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಗಳನ್ನು ವ್ಯವಸ್ಥಿತವಾಗಿ ಹಂಚಿಕೆ ಮಾಡಿ ರಾಜ್ಯದ ಮಹಿಳೆಯರ ಮಾನವನ್ನು ದೇಶ ವಿದೇಶಗಳಲ್ಲಿ ಹರಾಜು ಹಾಕಿದವರಿಗೂ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.
ಮಂಡ್ಯ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ತಾಲೂಕು ಅಧ್ಯಕ್ಷ ಎ.ಎನ್ ಜಾನಕೀರಾಂ, ಮನ್‌ಮುಲ್ ನಿರ್ದೇಶಕ ಡಾಲು ರವಿ, ಮಾಜಿ ಅಧ್ಯಕ್ಷ ಎಂ.ಬಿ ಹರೀಶ್ ಸೇರಿದಂತೆ ನೂರಾರು ಜೆಡಿಎಸ್ ಕಾರ್ಯಕರ್ತರು ಇದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…