ಮಂಡ್ಯ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಮುಂದಾಗಿದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾವೇಶ ನಡೆಸಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೆಡಿಎಸ್‌ ಭದ್ರಕೋಟೆಯಾದ ಹಾಸನದ ಮೇಲೆ ಕಣ್ಣಿಟ್ಟು ಸಿಎಂ ಸಿದ್ದರಾಮಯ್ಯ ಅವರು ಹಾಸನದಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಡೆಗೆ ಕೌಂಟರ್‌ ಕೊಡಲು ದಳಪತಿಗಳು ಸಜ್ಜಾಗಿದ್ದಾರೆ ಎನ್ನಲಾಗಿದ್ದು, ಮಂಡ್ಯದಲ್ಲಿ ಬೃಹತ್‌ ಅಭಿನಂದನಾ ಸಮಾರಂಭ ಆಯೋಜಿಸುವ ಮೂಲಕ ಕಾಂಗ್ರೆಸ್‌ ಜನಕಲ್ಯಾಣ ಸಮಾವೇಶಕ್ಕೆ ತಿರುಗೇಟು ನೀಡಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳ ಉಪಚುನಾವಣೆ ಗೆಲುವಿನ ಬಳಿಕ ಹಳೇ ಮೈಸೂರು ಭಾಗವನ್ನು ಕಬ್ಜಾ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಕಾಂಗ್ರೆಸ್ಸಿಗರ ಪವರ್‌ ಶೋಗೆ ಪ್ರತ್ಯುತ್ತರ ನೀಡಲು ಜೆಡಿಎಸ್‌ ಪ್ಲಾನ್‌ ಮಾಡಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಎಚ್‌ಡಿಕೆ ಅಭಿನಂದನಾ ಕಾರ್ಯಕ್ರಮದ ಹೆಸರಿನಲ್ಲಿ ಬೃಹತ್‌ ಸಮಾವೇಶ ನಡೆಸಲು ಸಿದ್ಧತೆ ನಡೆಸಿದೆ.

ಇದೇ ಡಿಸೆಂಬರ್.‌5ರಂದು ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಅಧಿಕ ಜನರನ್ನು ಸೇರಿಸುವ ಗುರಿಯನ್ನು ಜೆಡಿಎಸ್‌ ನಾಯಕರು ಹೊಂದಿದ್ದಾರೆ ಎನ್ನಲಾಗಿದೆ.

ಈ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್‌ ಕಾಆರ್ಯಕರ್ತರಿಗೆ ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ ಗಟ್ಟಿಗೊಳಿಸಲು ಚಿಂತಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

5 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

5 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

6 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

6 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

6 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

7 hours ago