ಮಂಡ್ಯ: ನಾಳೆ ಜೆಡಿಎಸ್ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಪಿತೂರಿ ನಡೆಸಿದ್ದಾರೆ. ಧರ್ಮ ರಕ್ಷಣೆ ಉದ್ದೇಶದಿಂದ ಯಾತ್ರೆ ಆಯೋಜನೆ ಮಾಡಲಾಗಿದೆ. ಧರ್ಮಸ್ಥಳದಿಂದ ಸಾಕಷ್ಟು ಸಮಾಜಮುಖಿ ಕೆಲಸಗಳು ನಡೆದಿವೆ. ಧರ್ಮಸ್ಥಳ ವಿರುದ್ಧ ನಡೆದ ಅಪಪ್ರಚಾರ ವಿರೋಧಿಸಿ ಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಎಸ್‌ಐಟಿ ಸಮರ್ಥವಾಗಿ ತನಿಖೆ ನಡೆಸಿದ್ದರೆ ಸ್ವಾಗತ ಕೋರುತ್ತಿದ್ದೆವು. ರಾಜ್ಯದ ಜನರಿಗೆ ಎಸ್‌ಐಟಿ ತನಿಖೆ ಮೇಲೆ ನಿರೀಕ್ಷೆಗಳಿಲ್ಲ. ಹೀಗಾಗಿ ಎನ್‌ಐಎ ತನಿಖೆಗೆ ವಹಿಸಿದರೆ ಷಡ್ಯಂತ್ರ ಬಯಲಾಗಲಿದೆ. ಷಡ್ಯಂತ್ರ ರೂಪಿಸಲು ವಿದೇಶಿ ಫಂಡಿಂಗ್ ನಡೆದಿರುವ ಬಗ್ಗೆ ಅನುಮಾನ ಇದೆ. ಇದರ ಬಗ್ಗೆ ಸತ್ಯಾಸತ್ಯತೆ ಹೊರತರಲು ಎನ್‌ಐಎ ತನಿಖೆ ಅವಶ್ಯಕ ಎಂದು ಆಗ್ರಹಿಸಿದರು.
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…