Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಂಡ್ಯ ನಗರಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಗೆಲುವು

ಮಂಡ್ಯ: ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್‌ಗೆ ಒಲಿದಿದ್ದಾಳೆ.

ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್‌ ಆಯ್ಕೆಯಾಗಿದ್ದಾರೆ.

ಈ ಮೂಲಕ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವಾಗಲೇ ಆಪರೇಷನ್‌ ಹಸ್ತ ಮಾಡಿ ಜೆಡಿಎಸ್‌ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಅವರು ಸೆಡ್ಡು ಹೊಡೆದಿದ್ದು, ಮತ್ತೆ ರಿವರ್ಸ್‌ ಆಪರೇಷನ್‌ ಮಾಡಿ ಕಾಂಗ್ರೆಸ್ಸಿನ ಓರ್ವ ಪ್ರಭಾವಿ ನಾಯಕನನ್ನು ತಮ್ಮ ಹಿಡಿತಕ್ಕೆ ತೆಗದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರದ ಪಾರುಪತ್ಯ ಸಾಧಿಸಲು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇನ್ನು ಚುನಾವಣೆ ನಡೆಯುವುದಕ್ಕೂ ಮುಂಚೆ ಇಂದು ನಗರಸಭೆ ಆವರಣದಲ್ಲೇ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಎರಡೂ ಬಣದವರು ಪ್ರತ್ಯೇಕ ವಾಹನಗಳಲ್ಲಿ ನಗರಸಭೆ ಆವರಣಕ್ಕೆ ಬಂದ ಸಂದರ್ಭ ತೀವ್ರ ನೂಕುನುಗ್ಗಲು ಉಂಟಾಗಿತ್ತು.

ಬಳಿಕ ಸ್ಥಳಕ್ಕಾಗಮಿಸಿದ ಕುಮಾರಸ್ವಾಮಿ ಅವರು, ಸ್ವತಃ ಗೇಟಿನ ಬಳಿ ತೆರಳಿ ಸದಸ್ಯರ ವಾಹನವನ್ನು ಪೊಲೀಸರ ಭದ್ರತೆಯಲ್ಲಿ ಆವರಣದೊಳಕ್ಕೆ ಕರೆ ತರುವಲ್ಲಿ ಯಶಸ್ವಿಯಾದರು.

ಬಳಿಕ ಚುನಾವಣೆ ಪ್ರಕ್ರಿಯೆ ನಡೆದು ಜೆಡಿಎಸ್‌ ಗೆಲುವು ಸಾಧಿಸಿತು. ಈ ವೇಳೆ ನಗರಸಭಾ ಆವರಣದೊಳಗೆ ಜೆಡಿಎಸ್‌ ಸದಸ್ಯರು ಸಿಹಿ ಹಂಚಿ ಖುಷಿಪಟ್ಟರು.

 

Tags: