ಮಂಡ್ಯ: ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ವಿಜಯಲಕ್ಷ್ಮೀ ಜೆಡಿಎಸ್‌ಗೆ ಒಲಿದಿದ್ದಾಳೆ.
ಕಾಂಗ್ರೆಸ್‌ನ ಚಲುವರಾಯಸ್ವಾಮಿ ಹಾಗೂ ಜೆಡಿಎಸ್‌ನ ಕುಮಾರಸ್ವಾಮಿಯವರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ನ ನಾಗೇಶ್ ಆಯ್ಕೆಯಾಗಿದ್ದಾರೆ.
ಈ ಮೂಲಕ ಚುನಾವಣೆಗೆ ಇನ್ನು ಕೆಲವೇ ದಿನಗಳು ಇರುವಾಗಲೇ ಆಪರೇಷನ್ ಹಸ್ತ ಮಾಡಿ ಜೆಡಿಎಸ್ ಎರಡು ಗಟ್ಟಿ ಕುಳಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದ ಕಾಂಗ್ರೆಸ್ಸಿಗೆ ಕುಮಾರಸ್ವಾಮಿ ಅವರು ಸೆಡ್ಡು ಹೊಡೆದಿದ್ದು, ಮತ್ತೆ ರಿವರ್ಸ್ ಆಪರೇಷನ್ ಮಾಡಿ ಕಾಂಗ್ರೆಸ್ಸಿನ ಓರ್ವ ಪ್ರಭಾವಿ ನಾಯಕನನ್ನು ತಮ್ಮ ಹಿಡಿತಕ್ಕೆ ತೆಗದುಕೊಂಡು ಮಂಡ್ಯ ನಗರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಈ ಮೂಲಕ ಮಂಡ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಧಿಕಾರದ ಪಾರುಪತ್ಯ ಸಾಧಿಸಲು ಹಗಲಿರುಳು ಶ್ರಮ ವಹಿಸುತ್ತಿದ್ದಾರೆ ಎನ್ನಲಾಗುತ್ತಿದೆ.
ಇನ್ನು ಚುನಾವಣೆ ನಡೆಯುವುದಕ್ಕೂ ಮುಂಚೆ ಇಂದು ನಗರಸಭೆ ಆವರಣದಲ್ಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.
ಎರಡೂ ಬಣದವರು ಪ್ರತ್ಯೇಕ ವಾಹನಗಳಲ್ಲಿ ನಗರಸಭೆ ಆವರಣಕ್ಕೆ ಬಂದ ಸಂದರ್ಭ ತೀವ್ರ ನೂಕುನುಗ್ಗಲು ಉಂಟಾಗಿತ್ತು.
ಬಳಿಕ ಸ್ಥಳಕ್ಕಾಗಮಿಸಿದ ಕುಮಾರಸ್ವಾಮಿ ಅವರು, ಸ್ವತಃ ಗೇಟಿನ ಬಳಿ ತೆರಳಿ ಸದಸ್ಯರ ವಾಹನವನ್ನು ಪೊಲೀಸರ ಭದ್ರತೆಯಲ್ಲಿ ಆವರಣದೊಳಕ್ಕೆ ಕರೆ ತರುವಲ್ಲಿ ಯಶಸ್ವಿಯಾದರು.
ಬಳಿಕ ಚುನಾವಣೆ ಪ್ರಕ್ರಿಯೆ ನಡೆದು ಜೆಡಿಎಸ್ ಗೆಲುವು ಸಾಧಿಸಿತು. ಈ ವೇಳೆ ನಗರಸಭಾ ಆವರಣದೊಳಗೆ ಜೆಡಿಎಸ್ ಸದಸ್ಯರು ಸಿಹಿ ಹಂಚಿ ಖುಷಿಪಟ್ಟರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…