ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು.
ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಂದರ್ಶನದಲ್ಲಿ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅವರು ಭಾಗವಹಿಸಿ ಉದ್ಯೋಗಾಕಾಂಕ್ಷಿಗಳಿಗೆ ಶುಭಕೋರಿದರು.
ಬಳಿಕ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರಿಗೆ ಉದ್ಯೋಗ ದೊರಕಿಸಿಕೊಡುವ ಉದ್ದೇಶದಿಂದ ಪುಟ್ಟಣ್ಣಯ್ಯ ಫೌಂಡೇಶನ್ ಹಲವು ಕಂಪೆನಿಗಳನ್ನು ಕ್ಷೇತ್ರಕ್ಕೆ ಕರೆತಂದು ಯುವಕ-ಯುವತಿಯರ ಸಂದರ್ಶನ ನಡೆಸಿ ಉದ್ಯೋಗ ದೊರಕಿಸಿಕೊಡಲು ಮುಂದಾಗಿದೆ. ಪುಟ್ಟಣ್ಣಯ್ಯ ಫೌಂಡೇಷನ್ ವತಿಯಿಂದ ನ.೧ರಂದು ಯದ್ಯೋಗಾಕಾಂಕ್ಷಿಗಳು ನೋಂದಾಯಿಸಿಕೊಳ್ಳಲು ವೆಬ್ ಆರಂಭಿಸಲಾಗಿತ್ತು, ೩೫೦ಕ್ಕೂ ಅಧಿಕ ಯುವಕ-ಯುವತಿಯರು ಹೆಸರು ನೋಂದಾಯಿಸಿಕೊಂಡಿದ್ದರು.
ಇದನ್ನೂ ಓದಿ:-ಸಾಲಭಾದೆ : ರೈತ ಆತ್ಮಹತ್ಯೆ
ಅದರ ಭಾಗವಾಗಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮೈಸೂರಿನ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯವರು ಆಗಮಿಸಿ,ಸಂದರ್ಶನ ನಡೆಸಿ ಆಯ್ಕೆಯಾದ ಯುವಕ-ಯುವತಿಯರಿಗೆ ವಾರದೊಳಗೆ ಉದ್ಯೋಗ ಕಲ್ಪಿಸಿಕೊಡುವ ವ್ಯವಸ್ಥೆ ಮಾಡಲಿದೆ. ಮುಂದಿನ ದಿನಗಳಲ್ಲಿ ಕಂಪೆನಿಯು ಪಟ್ಟಣದಲ್ಲಿ ಕಂಪೆನಿ ಶಾಖೆಯನ್ನು ತೆರೆದು ಹಲವಾರು ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪುಟ್ಟಣ್ಣಯ್ಯ ಫೌಂಡೇಷನ್‌ನ ಸ್ಮಿತಾ ಪುಟ್ಟಣ್ಣಯ್ಯ ಮಾತನಾಡಿ, ಶಿಕ್ಷಣ, ನಿರುದ್ಯೋಗ ನಿವಾರಣೆ, ರೈತರ ಅಭಿವೃದ್ಧಿ, ಮಾರುಕಟ್ಟೆ, ಸ್ವಯಂ ಉದ್ಯೋಗ, ಬಡತನ ನಿವಾರಣೆ ಸೇರಿದಂತೆ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಕಂಪೆನಿಗಳ ಸಹಯೋಗ ಪಡೆದುಕೊಂಡು ಫೌಂಡೇಶನ್ ಕೆಲಸ ಮಾಡುತ್ತಿದೆ ಎಂದರು.
ಈ ವೇಳೆ ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿಯ ದಕ್ಷಿಣ ಭಾರತ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಫಖ್, ರವಿಕುಮಾರ್, ಶಶಿಕಾಂತ್, ದೀಕ್ಷಿತ್, ಪುಟ್ಟಣ್ಣಯ್ಯ ಫೌಂಡೇಷನ್ ನಿರ್ದೇಶಕ ಹಿರೇಮರಳಿ ರಣಜಿತ್, ಮಾಧ್ಯಮ ಸಂಯೋಜಕ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…
ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…
ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್ ಪುಟಿನ್, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…
ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…