ಕೆ.ಆರ್.ಪೇಟೆ : ಸ್ವಾರ್ಥ ಸಾಧನೆ ಮಾಡಲು ಹೊರಟಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ತಿರಸ್ಕರಿಸಿ ಜಿಲ್ಲೆಯ ಸಮಗ್ರವಾದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್‌ಚಂದ್ರು ಅವರನ್ನು ಬೆಂಬಲಿಸಿ ಆಶೀರ್ವದಿಸಬೇಕು ಎಂದು ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದರು.
ಕೆ.ಆರ್.ಪೇಟೆ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಚನ್ನಪಟ್ಟಣದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡದೇ ಮಂಡ್ಯದಲ್ಲಿ ಪಕ್ಷ ಉಳಿಸುವ ಸಲುವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ ಎಂದು ಹೇಳುತ್ತಿರುವ ಕುಮಾರಸ್ವಾಮಿ ಅವರಿಂದ ಜಿಲ್ಲೆಗೆ ಏನು ಕೊಡುಗೆ ಸಿಕ್ಕಿದೆ ಎಂದು ಪ್ರಶ್ನಿಸಿದರು.
ಗಳಿಗೆಗೊಂದು ಗಂಟೆಗೊಂದು ಸುಳ್ಳು ಹೇಳುವ, ಕಣ್ಣೀರ ಕೋಡಿ ಹರಿಸಿ ಭಾವನಾತ್ಮಕ ಸಂಬಂಧವನ್ನು ಮುಂದಿಟ್ಟುಕೊಂಡು ಮತ ಕೇಳುವ ಸುಳ್ಳುಗಾರ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಈ ಭಾರಿ ಸೋಲಿನ ಕಹಿಯನ್ನು ಉಣಿಸುವ ಮೂಲಕ ಜಿಲ್ಲೆಯ ಜನತೆ ತಕ್ಕಪಾಠ ಕಲಿಸಬೇಕು ಎಂದರು.
ಕಾವೇರಿ ನದಿ ನೀರಿನ ಹೆಸರಿನಲ್ಲಿ ಜಿಲ್ಲೆಯ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುವ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ಜಿಲ್ಲೆಯ ಜನರಿಗೆ ದ್ರೋಹ ಮಾಡಿದ್ದಾರೆ. ಸ್ವಾರ್ಥ ಸಾಧನೆ ಮಾಡಿಕೊಂಡು ಬಿಜೆಪಿ ಪಕ್ಷಕ್ಕೆ ಶರಣಾಗಿರುವ ಅಪ್ಪಮಕ್ಕಳಿಗೆ ಜಿಲ್ಲೆಯ ಜನತೆ ಬುದ್ಧಿ ಕಲಿಸಬೇಕು ಎಂದು ಆಕ್ರೋಶ ಹೊರ ಹಾಕಿದರು.
ಕಾಂಗ್ರೇಸ್ ಕಾರ್ಯಕರ್ತರು ತಮ್ಮಲ್ಲಿನ ಅಸಮಾಧಾನ ಹಾಗೂ ಭಿನ್ನಮತವನ್ನು ಬದಿಗಿಟ್ಟು ಕೆಲಸ ಮಾಡಿ ಕಾಂಗ್ರೇಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಿ ನಾನು ನಿಮ್ಮ ಮನೆಮಗನಂತೆ ಕೆಲಸ ಮಾಡುತ್ತೇನೆ. ನಾವು ಅಭಿವೃದ್ಧಿ ಮಾಡಲಿಲ್ಲ ಎಂದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮನ್ನು ತಿರಸ್ಕರಿಸಿ ಮನೆಗೆ ಕಳಿಸಿ, ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ತುಂಬಲು ಕಾಂಗ್ರೇಸ್ ಬೆಂಬಲಿಸಿ ಎಂದು ಸಚಿವ ಚಲುವರಾಯಸ್ವಾಮಿ ಮನವಿ ಮಾಡಿದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…