ಕೆ.ಆರ್.ಪೇಟೆ : ಟ್ರಾಕ್ಟರ್‌ವೊಂದು ಹಿಮ್ಮುಖವಾಗಿ ಚಲಿಸಿ, ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಎದುರು ಸಂಭವಿಸಿದೆ.
ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ, ಹಣ್ಣಿನ ವ್ಯಾಪಾರಿ ಶ್ರೀನಿವಾಸ್ ಅವರ ಪುತ್ರ ಪ್ರವೀಣ್(34) ಮೃತಪಟ್ಟವರು.
ಪ್ರವೀಣ್ ಮಾರುಕಟ್ಟೆ ಎದುರಿನ ರಸ್ತೆಯ ಬಳಿ ನಿಂತಿದ್ದರು. ಈ ವೇಳೆ ಹಿಮ್ಮುಖವಾಗಿ ಚಲಿಸಿದ ಕಾರಣ ಪ್ರವೀಣ್‌ಗೆ ಡಿಕ್ಕಿ ಹೊಡೆದಿದೆ. ಆತ ಕೆಳಕ್ಕೆ ಬಿದ್ದಾಗ ಹಿಂಬದಿಯ ಚಕ್ರ ದೇಹದ ಮೇಲೆ ಹರಿದು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ದುಂಡಶೆಟ್ಟಿ-ಲಕ್ಷಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಪ್ರಕರಣ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೊಲೀಸರು ಟ್ರಾಕ್ಟರ್ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.





