ಮಂಡ್ಯ

ಕೆ.ಆರ್‌ ಪೇಟೆ | ಟ್ರ್ಯಾಕ್ಟರ್‌ ಹರಿದು ವ್ಯಕ್ತಿ ಸಾವು

ಕೆ.ಆರ್.ಪೇಟೆ : ಟ್ರಾಕ್ಟರ್‌ವೊಂದು ಹಿಮ್ಮುಖವಾಗಿ ಚಲಿಸಿ, ವ್ಯಕ್ತಿಯೊಬ್ಬರ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಪಟ್ಟಣದ ಮೈಸೂರು ರಸ್ತೆಯ ಎಪಿಎಂಸಿ ಮಾರುಕಟ್ಟೆ ಎದುರು ಸಂಭವಿಸಿದೆ.

ಪಟ್ಟಣದ ಅಗ್ರಹಾರ ಬಡಾವಣೆಯ ನಿವಾಸಿ, ಹಣ್ಣಿನ ವ್ಯಾಪಾರಿ ಶ್ರೀನಿವಾಸ್ ಅವರ ಪುತ್ರ ಪ್ರವೀಣ್(34) ಮೃತಪಟ್ಟವರು.

ಪ್ರವೀಣ್ ಮಾರುಕಟ್ಟೆ ಎದುರಿನ ರಸ್ತೆಯ ಬಳಿ ನಿಂತಿದ್ದರು. ಈ ವೇಳೆ ಹಿಮ್ಮುಖವಾಗಿ ಚಲಿಸಿದ ಕಾರಣ ಪ್ರವೀಣ್‌ಗೆ ಡಿಕ್ಕಿ ಹೊಡೆದಿದೆ. ಆತ ಕೆಳಕ್ಕೆ ಬಿದ್ದಾಗ ಹಿಂಬದಿಯ ಚಕ್ರ ದೇಹದ ಮೇಲೆ ಹರಿದು ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ದುಂಡಶೆಟ್ಟಿ-ಲಕ್ಷಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಪ್ರಕರಣ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಪೊಲೀಸರು ಟ್ರಾಕ್ಟರ್ ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

1 hour ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

2 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

2 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago