ಮಂಡ್ಯ

ಕೆ.ಆರ್.ಪೇಟೆ | ಕುಡಿಯುವ ನೀರಿನ ಸಮಸ್ಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಮತ್ತು ಸಿಇಒ

ಮಂಡ್ಯ : ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಶೀಳನೆರೆ ಗ್ರಾಮ ಪಂಚಾಯಿತಿಯ ಬೊಮ್ಮನಾಯಕನಹಳ್ಳಿ ಗ್ರಾಮದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಜಿಲ್ಲಾಧಿಕಾರಿ ಕುಮಾರ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್. ಅವರು ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮದಲ್ಲಿ ಪ್ರಸ್ತುತ ಖಾಸಗಿ ಕೊಳವೆ ಬಾವಿಯ ಮೂಲಕ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿ ಹಾಗೂ ಸಿಇಒ ಅವರು, ಖಾಸಗಿ ಕೊಳವೆ ಬಾವಿ ಮಾಲೀಕರಿಗೆ ನಿಯಮಾನುಸಾರ ಅನುದಾನ ಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಅಗತ್ಯವಿರುವ ಕಡೆ ಪರ್ಯಾಯ ನೀರು ಪೂರೈಕೆಗೆ ವ್ಯವಸ್ಥೆ ಮಾಡಬೇಕು. ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಲಭ್ಯತೆ ಹಾಗೂ ಸರಬರಾಜಿನ ಮೇಲೆ ನಿರಂತರ ನಿಗಾವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಮೋದ್ ಕುಮಾರ್ ಎನ್.ಜಿ., ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಷ್ಮಾ, ಶೀಳನೆರೆ ಗ್ರಾಮ ಪಂಚಾಯಿತಿ ಪಿಡಿಓ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಕೋಲ್ಕತ್ತಾ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್‌ಬಗಾನ್‌ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…

10 hours ago

ಪಾಣಾಜೆಯಲ್ಲಿ ಅತ್ಯಧಿಕ ಮಳೆ: 16.7 ಸೆಂಟಿಮೀಟರ್ ದಾಖಲು!

ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…

10 hours ago

ಅಕ್ರಮ ಕೇರಳ ಲಾಟರಿ ಮಾರಾಟ: ಓರ್ವ ಬಂಧನ

ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್‌ಗಳನ್ನು ವಶಕ್ಕೆ…

13 hours ago

ಮೈಸೂರಿನ ಜೆಕೆ ಮೈದಾನದಲ್ಲಿ ಶ್ವಾನಗಳ ಕಲರವ: ಗಮನ ಸೆಳೆದ ವೈವಿಧ್ಯಮಯ ತಳಿಗಳು

ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…

13 hours ago

ಹವಾಮಾನ ವೈಪರೀತ್ಯಕ್ಕೆ ದಸರಾ ಏರ್ ಶೋ ಮೊಟಕು: ಪ್ರೇಕ್ಷಕರಿಗೆ ನಿರಾಸೆ

ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…

13 hours ago

ಓದುಗರ ಪತ್ರ: ಹೆಚ್‌ಡಿಕೆಯವರೇ, ಟೀಕೆ ಮಾಡುವಾಗ ಎಚ್ಚರಿಕೆ ಇರಬೇಕಲ್ಲವೇ?

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…

15 hours ago