ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕತ್ತರಘಟ್ಟ ಗ್ರಾಮದ ಸತೀಶ್ ಅವರ ಮಗ ಕಿರಣ್ ಅವರೇ ಚಿರತೆ ದಾಳಿಗೆ ಒಳಗಾಗಿ ಗಾಯಗೊಂಡಿರುವ ರೈತ.
ಸೋಮವಾರ ರಾತ್ರಿ ಸುಮಾರು ೯ ಗಂಟೆಯ ಸಮಯದಲ್ಲಿ ಜಮೀನಿಗೆ ಹೋಗಿದ್ದು, ಗ್ರಾಮಕ್ಕೆ ವಾಪಸ್ ಬರುವ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯು ಕಿರಣ್ ಅವರ ಮೇಲೆ ದಾಳಿ ಮಾಡಿದಾಗ ಹೆದರದೇ ಚಿರತೆಯೊಂದಿಗೆ ಹೋರಾಡಿ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದಾರೆ.
ಇದೇ ರೀತಿ ಹಲವು ರೈತರ ಮೇಲೆ ದಾಳಿಗೆ ವಿಫಲ ಯತ್ನ ನಡೆಸಿದ್ದ ಚಿರತೆಯು ಕೊನೆಗೂ ರೈತ ಕಿರಣ್ ಮೇಲೆ ಮಾರಣಾಂತಿಕ ದಾಳಿ ನಡೆಸಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ರೈತರ ಸಾಕುಪ್ರಾಣಿಗಳಾದ ಕುರಿ, ಮೇಕೆ, ಹಸು, ಎಮ್ಮೆಗಳನ್ನು ಆಗಾಗ್ಗೆ ಹೊತ್ತೊಯ್ದು ತಿಂದು ಹಾಕುತ್ತಿರುವ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯು ವಿಫಲವಾಗಿದೆ ಎಂದು ಕತ್ತರಘಟ್ಡ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ
ಈಗ ರೈತನ ಮೇಲೆ ಚಿರತೆ ದಾಳಿ ಮಾಡಿದ್ದು, ಗಾಯಗೊಂಡ ರೈತ ಕಿರಣ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಬಗ್ಗೆ ಅರಣ್ಯ ಇಲಾಖೆಯ ಅಽಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರೂ ರೈತನನ್ನು ಭೇಟಿ ಮಾಡಿ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ವಿಫಲವಾಗಿದ್ದಾರೆ. ಹಾಗಾಗಿ ತಾಲ್ಲೂಕು ಆಡಳಿತವು ರೈತನ ನೆರವಿಗೆ ಬರಬೇಕು ಎಂದು ಕತ್ತರಘಟ್ಟ ಗ್ರಾಮಸ್ಥರು ಅಗ್ರಹಿಸಿದ್ದಾರೆ.
ಗ್ರಾಮಸ್ಥರ ಮನವಿಗೆ ತಹಸಿಲ್ದಾರ್ ಸ್ಪಂದನೆ
ಅರಣ್ಯ ಇಲಾಖೆ ಅಧಿಕಾರಿಗಳು ರೈತನ ಮೊಬೈಲ್ ಕರೆ ಸ್ವೀಕರಿಸದ ಕಾರಣ ತಹಸಿಲ್ದಾರ್ ಡಾ.ಎಸ್.ಯು.ಅಶೋಕ್ ಅವರಿಗೆ ಅಗತ್ಯ ಚಿಕಿತ್ಸೆ ಕೊಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಸಿಲ್ದಾರ್ ಡಾ.ಎಸ್.ಯು.ಅಶೋಕ್ ಅವರು ಕೂಡಲೇ ಆರ್‌ಎಫ್‌ಒ ಅನಿತಾ ಅವರಿಗೆ ದೂರವಾಣಿ ಕರೆ ಮಾಡಿ ರೈತನ ಚಿಕಿತ್ಸೆಗೆಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಯಾಳು ರೈತ ಕಿರಣ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ವನ್ಯಜೀವಿ ಸಂರಕ್ಷಣಾ ಇಲಾಖೆಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…