ಮಂಡ್ಯ

ಕೆ.ಆರ್‌.ಪೇಟೆ | ರೈತನ ಮೇಲೆ ಚಿರತೆ ದಾಳಿ ; ಪ್ರಾಣಾಪಾಯದಿಂದ ಪಾರು

ಕೆ.ಆರ.ಪೇಟೆ : ತಾಲ್ಲೂಕಿನ ಕಸಬಾ ಹೋಬಳಿಯ ಕತ್ತರಘಟ್ಟ ಗ್ರಾಮದಲ್ಲಿ ರೈತನ ಮೇಲೆ ಚಿರತೆ ದಾಳಿಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಕತ್ತರಘಟ್ಟ ಗ್ರಾಮದ ಸತೀಶ್ ಅವರ ಮಗ ಕಿರಣ್ ಅವರೇ ಚಿರತೆ ದಾಳಿಗೆ ಒಳಗಾಗಿ ಗಾಯಗೊಂಡಿರುವ ರೈತ.

ಸೋಮವಾರ ರಾತ್ರಿ ಸುಮಾರು ೯ ಗಂಟೆಯ ಸಮಯದಲ್ಲಿ ಜಮೀನಿಗೆ ಹೋಗಿದ್ದು, ಗ್ರಾಮಕ್ಕೆ ವಾಪಸ್ ಬರುವ ವೇಳೆ ಚಿರತೆ ದಾಳಿ ಮಾಡಿದೆ. ಚಿರತೆಯು ಕಿರಣ್ ಅವರ ಮೇಲೆ ದಾಳಿ ಮಾಡಿದಾಗ ಹೆದರದೇ ಚಿರತೆಯೊಂದಿಗೆ ಹೋರಾಡಿ ಪ್ರಾಣಾಪಾಯದಿಂದ ಪಾರಾಗಿ ಬಂದಿದ್ದಾರೆ.

ಇದೇ ರೀತಿ ಹಲವು ರೈತರ ಮೇಲೆ ದಾಳಿಗೆ ವಿಫಲ ಯತ್ನ ನಡೆಸಿದ್ದ ಚಿರತೆಯು ಕೊನೆಗೂ ರೈತ ಕಿರಣ್ ಮೇಲೆ ಮಾರಣಾಂತಿಕ ದಾಳಿ ನಡೆಸಿರುವುದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ರೈತರ ಸಾಕುಪ್ರಾಣಿಗಳಾದ ಕುರಿ, ಮೇಕೆ, ಹಸು, ಎಮ್ಮೆಗಳನ್ನು ಆಗಾಗ್ಗೆ ಹೊತ್ತೊಯ್ದು ತಿಂದು ಹಾಕುತ್ತಿರುವ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯ ಇಲಾಖೆಯು ವಿಫಲವಾಗಿದೆ ಎಂದು ಕತ್ತರಘಟ್ಡ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಬಿದ್ದಾಟಂಡ ವಾಡೆಯಲ್ಲಿ ಸಂಭ್ರಮದ ಪುತ್ತರಿ ಕೋಲಾಟ 

ಈಗ ರೈತನ ಮೇಲೆ ಚಿರತೆ ದಾಳಿ ಮಾಡಿದ್ದು, ಗಾಯಗೊಂಡ ರೈತ ಕಿರಣ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಬಗ್ಗೆ ಅರಣ್ಯ ಇಲಾಖೆಯ ಅಽಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರೂ ರೈತನನ್ನು ಭೇಟಿ ಮಾಡಿ ಇಲಾಖೆಯ ವತಿಯಿಂದ ಸಿಗುವ ಸೌಲಭ್ಯವನ್ನು ಒದಗಿಸಿಕೊಡುವಲ್ಲಿ ವಿಫಲವಾಗಿದ್ದಾರೆ. ಹಾಗಾಗಿ ತಾಲ್ಲೂಕು ಆಡಳಿತವು ರೈತನ ನೆರವಿಗೆ ಬರಬೇಕು ಎಂದು ಕತ್ತರಘಟ್ಟ ಗ್ರಾಮಸ್ಥರು ಅಗ್ರಹಿಸಿದ್ದಾರೆ.

ಗ್ರಾಮಸ್ಥರ ಮನವಿಗೆ ತಹಸಿಲ್ದಾರ್ ಸ್ಪಂದನೆ

ಅರಣ್ಯ ಇಲಾಖೆ ಅಧಿಕಾರಿಗಳು ರೈತನ ಮೊಬೈಲ್ ಕರೆ ಸ್ವೀಕರಿಸದ ಕಾರಣ ತಹಸಿಲ್ದಾರ್ ಡಾ.ಎಸ್.ಯು.ಅಶೋಕ್ ಅವರಿಗೆ ಅಗತ್ಯ ಚಿಕಿತ್ಸೆ ಕೊಡಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡುವಂತೆ ಗ್ರಾಮಸ್ಥರು ಮನವಿ ಮಾಡಿದರು.

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ತಹಸಿಲ್ದಾರ್ ಡಾ.ಎಸ್.ಯು.ಅಶೋಕ್ ಅವರು ಕೂಡಲೇ ಆರ್‌ಎಫ್‌ಒ ಅನಿತಾ ಅವರಿಗೆ ದೂರವಾಣಿ ಕರೆ ಮಾಡಿ ರೈತನ ಚಿಕಿತ್ಸೆಗೆಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಯಾಳು ರೈತ ಕಿರಣ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ವನ್ಯಜೀವಿ ಸಂರಕ್ಷಣಾ ಇಲಾಖೆಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

3 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

3 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

3 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

3 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

3 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

4 hours ago