ಮಂಡ್ಯ: ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ.
ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕೆ.ಎಸ್. ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆ.ಎಸ್.ನರಸಿಂಹಸ್ವಾಮಿರವರು ಮಲ್ಲಿಗೆ ಕವಿ ಎಂದೇ ಮನೆ ಮನೆ ಮಾತಾಗಿದ್ದಾರೆ ಎಂದು ಹೇಳಿದರು.
ಜಗತ್ತಿನ ಯಾವ ದೇಶದಲ್ಲೂ ಇರದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯ ಶ್ರೀಮಂತಿಕೆಯನ್ನು ನಮ್ಮ ಭಾರತ ದೇಶ ಹೊಂದಿದೆ. ಕುವೆಂಪು, ದಾ.ರಾ.ಬೇಂದ್ರೆಯಂತಹ ಮಹಾನ್ ಸಾಹಿತಿಗಳು ದೇಶದ ಸಾಹಿತ್ಯ ವೈಭವವನ್ನು ಹೆಚ್ಚಿಸಿದ್ದಾರೆ. ಅವರೆಲ್ಲರ ಸಾಧನೆಗಳನ್ನು ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ಮೈಸೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ. ಡಿ ಗಂಗಾಧರ್, ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.





