ಮಂಡ್ಯ

ನಾಡು ಕಂಡ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ: ನಾಡು ಕಂಡ ಶ್ರೇಷ್ಠ ಸಾಹಿತಿಗಳಲ್ಲಿ ಅಪರೂಪದ ಸಾಹಿತಿ ಕೆ.ಎಸ್.ನರಸಿಂಹಸ್ವಾಮಿ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಣ್ಣಿಸಿದ್ದಾರೆ.

ಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆದ ಕೆ.ಎಸ್. ನರಸಿಂಹಸ್ವಾಮಿ ಸಾಹಿತ್ಯ ಪ್ರಶಸ್ತಿ ಹಾಗೂ ಕಾವ್ಯ ಗಾಯನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೆ.ಎಸ್.ನರಸಿಂಹಸ್ವಾಮಿರವರು ಮಲ್ಲಿಗೆ ಕವಿ ಎಂದೇ ಮನೆ ಮನೆ ಮಾತಾಗಿದ್ದಾರೆ ಎಂದು ಹೇಳಿದರು.

ಜಗತ್ತಿನ ಯಾವ ದೇಶದಲ್ಲೂ ಇರದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯ ಶ್ರೀಮಂತಿಕೆಯನ್ನು ನಮ್ಮ ಭಾರತ ದೇಶ ಹೊಂದಿದೆ. ಕುವೆಂಪು, ದಾ.ರಾ‌.ಬೇಂದ್ರೆಯಂತಹ ಮಹಾನ್ ಸಾಹಿತಿಗಳು ದೇಶದ ಸಾಹಿತ್ಯ ವೈಭವವನ್ನು ಹೆಚ್ಚಿಸಿದ್ದಾರೆ. ಅವರೆಲ್ಲರ ಸಾಧನೆಗಳನ್ನು ಕುರಿತು ಮುಂದಿನ ಪೀಳಿಗೆಗೆ ತಿಳಿಸುವ ಜವಾಬ್ದಾರಿ ನಮ್ಮದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್, ಮೈಸೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ. ಡಿ ಗಂಗಾಧರ್, ಮುಡಾ ಅಧ್ಯಕ್ಷ ನಹೀಮ್, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸೇರಿದಂತೆ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

11 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

11 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

11 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

11 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

11 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

13 hours ago