ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಜಿಲ್ಲೆಯಾದ್ಯಂತ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ಹಾರಿಸಲು ಕರೆ ನೀಡಲಾಗಿದೆ.
ಈ ಅಭಿಯಾನಕ್ಕೆ ಇಂದು ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಚಾಲನೆ ನೀಡಿದರು.
ಡಿಸೆಂಬರ್.20ರಿಂದ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯದಲ್ಲಿ ಸರ್ವ ರೀತಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿಂದು ಕನ್ನಡ ಬಾವುಟ ವಿತರಿಸುವ ಕಾರ್ಯಕ್ರಮ ನಡೆದಿದ್ದು, ಹಲವು ಮನೆಗಳಿಗೆ ಕನ್ನಡ ಬಾವುಟ ವಿತರಿಸುವ ಮೂಲಕ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು.
ಇಂದು ನಡೆದ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ, ಸಿಇಓ ಶೇಖರ್ ತನ್ವೀರ್ ಆಸೀಫ್, ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಹಲವರು ಭಾಗಿಯಾಗಿದ್ದರು.