Categories: ಮಂಡ್ಯ

“ಕನ್ನಡ-ಕನ್ನಡಿಗ-ಕರ್ನಾಟಕ” ಕಾರ್ಯಕ್ರಮ: ನ.24 ರಂದು ಆಯ್ಕೆ ಪ್ರಕ್ರಿಯೆ

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ದೂರದರ್ಶನ ಚಂದನವು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ ‘ಮಧುರ ಮಧುರವೀ ಮಂಜುಳಗಾನ” – “ನಾವಾಡುವ ನುಡಿಯ ಕನ್ನಡ ನುಡಿ” ಶೀರ್ಷಿಕೆಯಡಿ, ಕನ್ನಡ ನಾಡು-ನುಡಿಯ ಕುರಿತಾದ ಚಲನಚಿತ್ರ ಗೀತೆಗಳು ಹಾಗು ಕವಿಗಳ ಗೀತ ರಚನೆಗಳನ್ನೊಳಗೊಂಡ “ಕನ್ನಡ-ಕನ್ನಡಿಗ-ಕರ್ನಾಟಕ” ಕಾರ್ಯಕ್ರಮವನ್ನು ಡಿಸೆಂಬರ್ 1 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಗೀತ ನೃತ್ಯ ಹಬ್ಬದಲ್ಲಿ ಭಾಗವಹಿಸಲು ಇಚ್ಛಿಸುವವರು ನವೆಂಬರ್ 24 ರಂದು ಬೆಳಿಗ್ಗೆ 9 ಗಂಟೆಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಮತ್ತು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9900265919/ 9901729802 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಾಂಸ್ಕೃತಿಕ ಸಮಿತಿ ಸದಸ್ಯ ಕಾರ್ಯದರ್ಶಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

6 mins ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

22 mins ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

37 mins ago

ಮಹಿಳಾ ಮೀಸಲಾತಿಗೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಹಾವೇರಿ: ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು…

54 mins ago

ನೋಯ್ಡಾ ಹಿಂಸಾತ್ಮಕ ಪ್ರತಿಭಟನೆ ಹಿಂದಿನ ಮಾಸ್ಟರ್‌ಮೈಂಡ್‌ ತಮಿಳುನಾಡಿನಲ್ಲಿ ಅರೆಸ್ಟ್‌

ಚೆನ್ನೈ: ನೋಯ್ಡಾದಲ್ಲಿ ನಡೆದ ಕಾರ್ಮಿಕರ ಪ್ರತಿಭಟನೆ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಹಿಂಸಾತ್ಮಕ ಕಾರ್ಮಿಕರ ಪ್ರತಿಭಟನೆಯಲ್ಲಿ ಪ್ರಮುಖ ಆರೋಪಿಗಳನ್ನು…

1 hour ago

ಕೇದಾರನಾಥ ಧಾಮದಲ್ಲಿ ಯಾತ್ರಾರ್ಥಿಗಳಿಗೆ 24 ಗಂಟೆ ಬಿಸಿನೀರು: ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ

ಡೆಹರಾಡೂನ್:‌ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಶೀಘ್ರದಲ್ಲೇ ತಣ್ಣೀರಿನ ಬದಲಿಗೆ 24 ಗಂಟೆಗಳ ಬಿಸಿನೀರಿನ ಪೂರೈಕೆಯನ್ನು ಒದಗಿಸಲಾಗುವುದು ಎಂದು…

3 hours ago