ಮಂಡ್ಯ

10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು: ಗೊ.ರು.ಚ ಹಕ್ಕೊತ್ತಾಯ

ಮಂಡ್ಯ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಈ ನಿಟ್ಟಿನಲ್ಲಿ 10ನೇ ತರಗತಿವರೆಗೆ ಕನ್ನಡ ಮಾಧ್ಯಮ ಕಡ್ಡಾಯವಾಗಬೇಕು. ಇಂಗ್ಲೀಷ್ ಮಾಧ್ಯಮದ ಶಾಲೆ ತೆರೆಯುವುದನ್ನು ಕೂಡಲೇ ನಿಲ್ಲಿಸಬೇಕು ಎಂದು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಗೊ.ರು. ಚೆನ್ನಬಸಪ್ಪ ಹಕ್ಕೊತ್ತಾಯ ಮಂಡಿಸಿದರು.

ಇಂದು (ಡಿ.20) ನಗರದಲ್ಲಿ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಭಾಷಣ ಮಾಡಿದ ಅವರು, ಕರ್ನಾಟಕದಲ್ಲಿ ತಂತ್ರಜ್ಞಾನ ನಿಧಾನವಾಗಿ ಬೆಳೆಯುತ್ತಿದೆ. ತಂತ್ರಜ್ಞಾನ ಅಭಿವೃದ್ದಿಯ ಜೊತೆಗೆ ಅದನ್ನು ಬಳಸಿಕೊಂಡು ಕಿರಿಯ ಪೀಳಿಗೆಯ ಎದೆಗೆ ಕನ್ನಡ ಭಾಷೆಯನ್ನು ಇಳಿಸಬೇಕು ಎಂದು ಕರೆ ನೀಡಿದರು.

ಮೊದಲು ಕನ್ನಡ ಭಾಷೆಯ ಬಗ್ಗೆಯೆ ಮಾತನಾಡುತ್ತಾ ಕನ್ನಡ ಭಾಷೆ ಎದುರಿಸುತ್ತಿರುವ ಬಿಕ್ಕಟ್ಟುಗಳು, ಅಂತರರಾಜ್ಯ ಭಾಷಾ ವಿನಿಮಯ, ಹಿಂದಿ ಹೇರಿಕೆ, ತಂತ್ರಜ್ಞಾನದ ಅವಲಂಬನೆ, ಗಡಿನಾಡ ಕನ್ನಡಿಗರ ಬವಣೆ, ಪುಸ್ತಕ ಸಂಸ್ಕೃತಿಯ ಪೋಷಣೆ, ಮಹಿಳೆಯರಿಗೆ ದೊರಕದ ಸ್ಥಾನ-ಮಾನ ಸೇರಿದಂತೆ 20ಕ್ಕೂ ಹೆಚ್ಚು ಅಂಶಗಳ ಕಡೆಗೆ ಸರ್ಕಾರದ ಪ್ರತಿನಿಧಿಗಳು ಹಾಗೂ ನೆರೆದಿದ್ದ ಜನರನ್ನು ಗಮನಸೆಳೆದರು.

ಗೊ.ರು.ಚನ್ನಬಸಪ್ಪ ಅವರ ಭಾಷಣದ ಪ್ರಮುಖ ಅಂಶಗಳು

ಕನ್ನಡವು ಕಾವ್ಯ, ಕವನ, ನಾಟಕ, ಕಾದಂಬರಿ, ವ್ಯಾಕರಣ ಮುಂತಾದ ಪರಂಪರೆಯ ಸಾಹಿತ್ಯಕ್ಕೆ ಸೀಮಿತವಾಗಿ ಉಳಿದಿಲ್ಲ.

ವಿಜ್ಞಾನ, ತಂತ್ರಜ್ಞಾನ, ಕಾನೂನು, ವೈದ್ಯಕೀಯ ಮುಂತಾದ ಕ್ಷೇತ್ರದಲ್ಲಿ ಕನ್ನಡ ಬೆಳೆಯುತ್ತಿದೆ

ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೈಂಕರ್ಯದಲ್ಲಿ ಉದ್ಯಮಿಗಳು, ಸ್ವಯಂ ಸೇವಾ ಸಂಸ್ಥೆಗಳು, ವಿದೇಶಿ ಕನ್ನಡಿಗರು ಕೈಜೋಡಿಸಬೇಕು.

ಕನ್ನಡ ಭಾಷೆಯ ಬೆಳವಣಿಗೆಗೆ ತಂತ್ರಜ್ಞಾನದ ಪೋಷಣೆ ಅತ್ಯಗತ್ಯ. ಗೂಗಲ್‌, ಯಾಂತ್ರಿಕ ಬುದ್ಧಿಮತ್ತೆಗೂ ಬರಲಿ ಶುದ್ಧ ಕನ್ನಡ ಪ್ರೇಮ.

ಜ್ಞಾನ ಪಡೆಯುವ ತಂತ್ರಜ್ಞಾನಕ್ಕೆ ಕನ್ನಡವನ್ನು ಹೊಂದಿಸಿದರೆ ಕನ್ನಡ ಜ್ಞಾನದ ಭಾಷೆ ಆಗುತ್ತದೆ.

ಜನಪ್ರಧಿನಿಧಿಗಳಲ್ಲಿ, ಉನ್ನತ ಅಧಿಕಾರಿಗಳಲ್ಲಿ ಕನ್ನಡ ಭಾಷಾ ಪ್ರೇಮದ ಕೊರತೆ ಇರುವಂತೆ ಕಾಣುತ್ತದೆ.

ಕನ್ನಡ ಸಾಹಿತ್ಯ ಪರಿಷತ್ತು ಬೇರೆ ಬೇರೆ ಭಾಷೆಗಳ ಜೊತೆಯಲ್ಲಿ ವಿನಿಮಯ ಕಾರ್ಯಕ್ರಮಗಳನ್ನು ದೊಡ್ಡ ಪ್ರಮಾಣದಲ್ಲಿ ಕೈಗೊಳ್ಳಬೇಕು.

ಕಲೆ, ನಾಟಕ, ಸಂಗೀತ, ಬಯಲಾಟ ಮುಂತಾದವುಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಪರಿಚಯಿಸಿಕೊಡುವ ಕೆಲಸ ಆದ್ಯತೆಯ ಮೇಲೆ ಮಾಡಬೇಕು

ಹಿಂದಿ ಭಾಷೆಯನ್ನು ರಾಷ್ಟ್ರ ಭಾಷೆ ಎಂಬುದನ್ನು ಪ್ರತ್ಯಕ್ಷ, ಪರೋಕ್ಷವಾಗಿ ಹೇರುವ ಹುನ್ನಾರವನ್ನು ಕೇಂದ್ರ ಸರ್ಕಾರಗಳು ಮಾಡುತ್ತಲೇ ಬಂದಿವೆ. ಕನ್ನಡ ವಿಶ್ವವಿದ್ಯಾನಿಲಯಕ್ಕೆ ವಿಶೇಷ ಗಮನ ಹರಿಸಬೇಕು.

ಕೇಂದ್ರ ರಾಜ್ಯಗಳ ಹಣಕಾಸು ಸಂಬಂಧದ ಕುರಿತು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಬೇಕು. ಕೇಂದ್ರ ಸರ್ಕಾರ ಸಂವಿಧಾನ ಮತ್ತು ಹಣಕಾಸು ತಜ್ಞರ ಒಂದು ವಿಶೇಷ ಆಯೋಗ ರಚಿಸಬೇಕು.

ಹಬ್ಬ, ಹರಿದಿನಗಳು, ಉತ್ಸವ ಆರಾಧನೆಗಳು, ಧಾರ್ಮಿಕ ಮುಖಂಡರ ಜಯಂತಿಗಳು ಜನರನ್ನು ಒಟ್ಟಿಗೆ ತರುವ ಕೆಲಸಕ್ಕೆ ಬದಲಾಗಿ ಸಮಾಜವನ್ನು ಒಡೆಯುವ ಆಯುಧಗಳಾಗುತ್ತಿವೆ.

ಪರಿಸರ ಉಳಿದರೆ ಮಾನವ ಉಳಿಯುವುದು. ಭಾರತದ ಜೀವಜಲವಾಗಿರುವ ಪಶ್ಚಿಮ ಘಟ್ಟವು ಇಂದು ಅಪಾಯವನ್ನು ಎದುರಿಸುತ್ತಿದೆ. ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಯಬಾರದು. ಪಶ್ಚಿಮಘಟ್ಟ ಪ್ರದೇಶ ಅನೇಕ ಮುಖ್ಯ ನದಿಗಳ ಮೂಲವಾಗಿದ್ದು ಅದರ ರಕ್ಷಣೆಗೆ ಆದ್ಯತೆ ನೀಡಬೇಕು.

ಲಿಂಗ ಸಮಾನತೆಯ ಮೌಲ್ಯವನ್ನು ಇಂದಿನ ಜೀವನದಲ್ಲಿ ಅಳವಡಿಸಿಕೊಳಗಳುವ ಅಗತ್ಯವನ್ನು ನಾವು ಮನಗಾಣಬೇಕು.

ಕನ್ನಡಿಗರಿಗೆ ಉದ್ಯೋಗದ ಅವಕಾಶಗಳು ಹೆಚ್ಚು ದೊರೆಯುತ್ತಿಲ್ಲ. ನಿರುದ್ಯೋಗ ಯುವಜನತರಯ ಬದುಕನ್ನು ದುರ್ಭರಗೊಳಿಸುತ್ತಿದೆ. ಸರೋಜಿನಿ ಮಹಿಷಿ ಸಮಿತಿ ವರದಿ ಇನ್ನೂ ಅನುಷ್ಠಾನಗೊಂಡಿಲ್ಲ. ಕೂಡಲೇ ಅನುಷ್ಠಾನಗೊಳಿಸಬೇಕು.

ಬ್ಯಾಂಕ್, ಅಂಚೆ ಕಚೇರಿಗಳಲ್ಲಿ ಹಿಂದಿ ಭಾಷಿಕರು ತುಂಬಿ ಹೋಗಿದ್ದಾರೆ. ಕೇಂದ್ರ ಸರ್ಕಾರವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದಿಗೆ ಪ್ರಾಶಸ್ತ್ಯ ನೀಡುತ್ತಾ ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಡುವುದು ಸಂವಿಧಾನ ಅಥವಾ ಒಕ್ಕೂಟ ತತ್ವಕ್ಕೆ ವಿರೋಧಿ ಕ್ರಮವೇನಲ್ಲ.

ಗಡಿನಾಡು ಪ್ರದೇಶಗಳಲ್ಲಿರುವ ಕನ್ನಡಿಗರಲ್ಲಿ ಕನ್ನಡತನ, ಕನ್ನಡ ಪ್ರಜ್ಞೆಗಳನ್ನು ಮೂಡಿಸುವ ಬಗ್ಗೆ ತಾತ್ವಿಕ ನಿರ್ಧಾರ ಕೈಗೊಳ್ಳಬೇಕು.

ಗ್ರಾಮೀಣ ಪ್ರದೇಶದ ಗ್ರಂಥಾಲಯಗಳು ಕಟ್ಟಡದ ಕೊರತೆ, ವಾರ್ತಾ ಪತ್ರಿಕೆಗಳ ಮತ್ತು ವಾರ್ಷಿಕವಾಗಿ ಪುಸ್ತಕಗಳ ಸಂಗ್ರಹ ಸೇರಿದಂತೆ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದೆ. ಇದರ ಬಗ್ಗೆ ಸರ್ಕಾರ ಸೂಕ್ತ ಗಮನ ನೀಡಬೇಕು.

ಶಾಲಾ ಕಾಲೇಜು ಮಕ್ಕಳಿಗೆ ನಮ್ಮ ಇತಿಹಾಸ, ಪ್ರಕೃತಿ, ವನ್ಯಜೀವಿಧಾಮ ಮುಂತಾದವುಗಳ ಪರಿಚಯವಾಗುವಂತೆ ನಿಯತಕಾಲಿಕವಾಗಿ ಪ್ರವಾಸಗಳನ್ನು ಏರ್ಪಡಿಸುವಂತೆ ಒಂದು ಕ್ರಮಬದ್ಧ ಯೋಜನೆಯನ್ನು ರೂಪಿಸಬೇಕು.

ಕನ್ನಡ ಶಾಸ್ತ್ರೀಯ ಭಾಷಾ ಉನ್ನತ ಅಧ್ಯಯನ ಕೇಂದ್ರವನ್ನು ಬೆಳೆಸುವಲ್ಲಿ ಸರ್ಕಾರ ಮತ್ತು ಕನ್ನಡ ವಿದ್ವಾಂಸರು ಗಮನ ಕೊಡಬೇಕು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

39 mins ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

48 mins ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

1 hour ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

2 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

2 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

2 hours ago