ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇಂದು ಸಮ್ಮೇಳನದ ಪ್ರತಿನಿಧಿಗಳ ಆನ್‌ಲೈನ್ ನೋಂದಣಿಗೆ ಚಾಲನೆ ದೊರೆತಿದೆ.
ಇಂದು ಕೆಆರ್‌ಎಸ್ ಬೃಂದಾವನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಚಿವ ಚಲುವರಾಯಸ್ವಾಮಿ ಅವರು, ಆನ್‌ಲೈನ್ ನೋಂದಣಿಗೆ ಚಾಲನೆ ನೀಡಿದರು.
ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ನೋಂದಣಿಯಾಗಿ ಭಾಗವಹಿಸಲು 600 ರೂ ನಿಗದಿಯಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಿದ ನಂತರ ಹಣ ಪಾವತಿ ಕೂಡ ಆನ್‌ಲೈನ್ ಮೂಲಕ ಮಾಡಬೇಕಾಗುತ್ತದೆ.
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿರುವವರು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳಲು ಇಂದಿನಿಂದ 20 ದಿನಗಳ ಕಾಲ ಅವಕಾಶ ನೀಡಲಾಗಿದೆ.