ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಆಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಇಂದು ʼಕನ್ನಡಕ್ಕಾಗಿ ಓಡುʼ ಎಂಬ ಘೋಷಣೆ ಮ್ಯಾರಥಾನ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 10,000ಕ್ಕೂ ಅಧಿಕ ಮ್ಯಾರಥಾನ್ ಅಥ್ಲೀಟ್‌ಗಳ ಜೊತೆ ಇನ್ನಿತರರು ಪಾಲ್ಗೊಂಡಿದ್ದರು. ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಸ್ಯಾಂಜೋ ಆಸ್ಪತ್ರೆಯವರೆಗೆ ಈ ಮ್ಯಾರಥಾನ್ ನಡೆಯಿತು.
ಶಾಸಕ ಪಿ. ರವಿಕುಮಾರ್ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ ಯುವಕರು, ಯುವತಿಯರು, ವಿದ್ಯಾರ್ಥಿಗಳು ಉತ್ಸಾಹದಿಂದ ಹೆಜ್ಜೆ ಹಾಕಿದರು.
ಚಿತ್ರನಟರಾದ ಡಾಲಿ ಧನಂಜಯ್, ನೀನಾಸಂ ಸತೀಶ್, ಸಪ್ತಮಿ ಗೌಡ, ಅವರು ಕೂಡ ಸ್ವಲ್ಪ ದೂರ ಓಡುವ ಮೂಲಕ ಕಾರ್ಯಕ್ರಮಕ್ಕೆ ಉತ್ಸಾಹ ತುಂಬಿದರು.
ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಗೌರಿ ಗದ್ದೆ ಆಶ್ರಮದ ವಿನಯ್ ಗುರೂಜಿ, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ರಮಾನಂದ ಶರ್ಮ ಯಾವುದೋ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಟೆಕ್ಕಿಯೊಬ್ಬರು ವೈದ್ಯರ ಬಳಿ ಹೋಗಿದ್ದರಂತೆ. ವೈದ್ಯರು ಅವರನ್ನು ಸ್ಥೂಲವಾಗಿ ಪರೀಕ್ಷಿಸಿ, ಮೂರು…
ತಿ.ನರಸೀಪುರ: ಪಟ್ಟಣದ ಕೆಎಸ್‌ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ; ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ೬,೧೮೩ ವಿದ್ಯಾರ್ಥಿಗಳು ಮಡಿಕೇರಿ: ಮಾ.೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗ…
ನವೀನ್ ಕುಮಾರ್ ಕ್ವಿಂಟಾಲ್ ರಾಗಿಗೆ ೪ ಕೆಜಿ ಕಳೆಯುತ್ತಿರುವುದರಿಂದ ನಷ್ಟ ಎಂಬುದು ರೈತರ ಅಳಲು ಪಿರಿಯಾಪಟ್ಟಣ: ರಾಗಿ ಖರೀದಿ ಕೇಂದ್ರಗಳಲ್ಲಿ…
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…