ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20, 21, 22 ರಂದು ಜಿಲ್ಲೆಯಲ್ಲಿ ನಡೆಯಲಿದೆ. ಈ ಸಂಬಂಧ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು(ಜು.14) ಸ್ಥಳ ಪರಿಶೀಲನೆ ನಡೆಸಿದರು.
ಸದ್ಯದಲ್ಲೇ ಸಮ್ಮೇಳನಕ್ಕೆ ಸ್ಥಳ ನಿಗದಿ
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಜಿಲ್ಲಾಡಳಿತ ಅಮರಾವತಿ ಹೋಟೆಲ್ ಹಿಂಭಾಗ, ಚಿಕ್ಕ ಮಂಡ್ಯ ಮತ್ತು ಬೈಪಾಸ್ ಈ 3 ಸ್ಥಳಗಳ ಆಯ್ಕೆ ಮಾಡಿದೆ. ಸದ್ಯದಲ್ಲೇ ಒಂದು ಸ್ಥಳವನ್ನು ನಿಗದಿ ಮಾಡಲಾಗುವುದು ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಚರಣೆ ಮಾಡುವುದಕ್ಕೆ ರಾಜ್ಯ ಸಮಿತಿ ಹಾಗೂ ಜಿಲ್ಲಾ ಸಮಿತಿ ಎಲ್ಲಾ ಒಟ್ಟಾಗಿ ಸಭೆ ನಡೆಸಿ ಡಿಸೆಂಬರ್ 21,22,23 ರಂದು ನಡೆಸಲು ತೀರ್ಮಾನಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳ ಆಚರಣೆಗೆ ಬರುವುದಕ್ಕೆ ಜನರಿಗೆ ಯಾವುದೇ ತರಹ ತೊಂದರೆ ಆಗಬಾರದು ಎಂದು ಡಿಸೆಂಬರ್ ಮಾಹೆಯಲ್ಲಿ ಮಳೆಗಾಲ ಇಲ್ಲದಿರುವಾಗ ಮತ್ತು ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂಬ ಉದ್ದೇಶದಿಂದ ಡಿಸೆಂಬರ್ ಮಾಹೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ, ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ನಗರದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ಹಾಗೂ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ಸಾಹಿತ್ಯ ಸಮ್ಮೇಳನ ಆಯೋಜಿಸುವ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು.