ಮಂಡ್ಯ

ನುಡಿ ಜಾತ್ರೆಗೆ ಸಕ್ಕರೆ ನಗರ ಸಜ್ಜು : ಸಚಿವ ಚಲುವರಾಯಸ್ವಾಮಿ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನುಡಿ ಜಾತ್ರೆಗೆ ಸಕ್ಕರೆ ನಗರಿ ಮಂಡ್ಯ ಸಜ್ಜಾಗುತ್ತಿದ್ದು, ಸಮ್ಮೇಳನದ ಪ್ರಚಾರಕ್ಕಾಗಿ  ಕನ್ನಡಕ್ಕಾಗಿ ಓಟ ಎಂಬ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಅವರು ಇಂದು(ಡಿ.17) 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು.

ಮ್ಯಾರಥಾನ್ ಸ್ಪರ್ಧೆಯಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಜನತೆಯನ್ನು ನೋಡಿದ್ರೆ ಖುಷಿ ಆಗುತ್ತಿದೆ. ಇಡೀ ರಾಜ್ಯದ ಜನ ಮಂಡ್ಯದ ಕಡೆ ತಿರುಗಿ ನೋಡುವಂತೆ ಪ್ರತಿಯೊಬ್ಬರೂ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ, ಸಮ್ಮೇಳನವನ್ನು ಯಶಸ್ವಿಗೊಳಿಸಲು ಕೈಜೋಡಿಸಿ ಎಂದರು.

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ  ಸ್ವಾಮೀಜಿ  ಮಾತನಾಡಿ, ಜಿಲ್ಲೆಯಲ್ಲಿ ನಡೆಯತ್ತಿರುವ ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆಯು ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷವಾದ ಕಾರ್ಯಕ್ರಮವಾಗಿದ್ದು, ಈ ಮೂಲಕ ಎಲ್ಲಾ ಕನ್ನಡಿಗರು ಒಂದಾಗಬೇಕು.ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತೆ ಎಂದು ಕನ್ನಡಕ್ಕಾಗಿ ನಡೆಯುತ್ತಿರುವ ಈ ಓಟ ಯಶಸ್ವಿಯಾಗಲಿ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ  ಮಾತನಾಡಿ, ಡಿಸೆಂಬರ್ 20, 21, 22 ರಂದು 3 ದಿನಗಳ ಕಾಲ ಕನ್ನಡ ಸಮ್ಮೇಳನವನ್ನು ಆಚರಿಸುತ್ತಿದ್ದೂ, ಇವತ್ತಿನ ಕನ್ನಡದ ಓಟ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿ ಓಟವಾಗಿದೆ. ಎಲ್ಲರೂ ಮಂಡ್ಯದ ಕನ್ನಡ ಹಿರಿಮೆಯನ್ನು ಹಾಗೂ ಕನ್ನಡದ ಅಭಿಮಾನವನ್ನು ತೋರ್ಪಡಿಸಬೇಕು ಎಂದರು.

ಗೌರಿಗದ್ದೆಯ ವಿನಯ್ ಗುರೂಜಿ  ಮಾತನಾಡಿ, ಕನ್ನಡಕ್ಕಾಗಿ ಓಟ ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಮೂಲಕ ಮಂಡ್ಯ ಜಿಲ್ಲೆಯು ಕನ್ನಡದ ಉಳಿವಿಗೆ ಸಾಕ್ಷಿಯಾಗಲಿ. ಕನ್ನಡ ನೆಲ, ಜಲ, ಭಾಷೆಯನ್ನು ಕಾಪಾಡುವ ಜವಾಬ್ದಾರಿ ಎಲ್ಲರ ಮೇಲಿದೆ. ಕಲೆಯೊಂದಿಗೆ ಕನ್ನಡವನ್ನು ಬೆಳೆಸಿ ಎಂದರು.

ಜಿಲ್ಲಾಧಿಕಾರಿ ಡಾ. ಕುಮಾರ, ವೇದಿಕೆ ಮೇಲಿರುವ ಗಣ್ಯರುಗಳನ್ನು ಸ್ವಾಗತಿಸಿದರು. ಚಲನಚಿತ್ರ ನಟ ಡಾಲಿ ಧನಂಜಯ್, ನೀನಾಸಂ ಸತೀಶ್, ನಟಿ ಸಪ್ತಮಿಗೌಡ ಅವರುಗಳು ಮ್ಯಾರಥಾನ್ ಸ್ಪರ್ಧೆ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಬಿಜಿಎಸ್ ಮಠದ ಪುರುಷೋತ್ತಮ ಗುರೂಜಿ, ಶಾಸಕರುಗಳಾದ ಪಿ.ರವಿಕುಮಾರ್, ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೆಗೌಡ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ ಶಿವಾನಂದಮೂರ್ತಿ, ನಗರಸಭೆ ಅಧ್ಯಕ್ಷ ಎಂ ಬಿ ಪ್ರಕಾಶ್, ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ವೆಂಕಟರಮಣೇಗೌಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು: ಡಿಸಿಪಿ ಮುತ್ತುರಾಜು ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್‌ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ…

1 hour ago

ಎಲ್ಲಾ ಕ್ಷೇತ್ರಗಳಿಗೂ 2000 ಕೋಟಿ ವಿತರಣೆ ಮಾಡುತ್ತೇವೆ: ಸಿ.ಎಂ ಘೋಷಣೆ

ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ…

2 hours ago

ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಿಯಾದೆ | ಹೆಚ್.ಡಿ.ದೇವೇಗೌಡ

ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ…

2 hours ago

ಬೆಳಗಾವಿ ಅಧಿವೇಶನ | ಟಿ.ಬಿ ಜಯಚಂದ್ರಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ…

2 hours ago

ಮಂಡ್ಯ ಸಾಹಿತ್ಯ ಸಮ್ಮೇಳನ | ಪುಸ್ತಕ ಮಾರಾಟ ಬೆಂಬಲಕ್ಕೆ ಮನವಿ

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ…

3 hours ago

ಚಾಮರಾಜನಗರಕ್ಕೆ ಹೆಚ್ಚುವರಿ ನವೋದಯ ಶಾಲೆಗೆ ಮನವಿ

ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರಿಗೆ…

4 hours ago