Mysore
14
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಕನ್ನಡ ಸಾಹಿತ್ಯ ಸಮ್ಮೇಳನ: ನೂತನ ಕಚೇರಿ ಉದ್ಘಾಟನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಯಲಿದ್ದು, ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ಪ್ರಾರಂಭಿಸಿದೆ.

ಭಾನುವಾರ(ಜು.14) ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ನೂತನ ಕಚೇರಿ ಉದ್ಘಾಟಿಸಿ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿದರು.

ಕಚೇರಿಯಲ್ಲಿ ಕವಿವಾಣಿಗಳ ಕಾವ್ಯದ ಸಿಂಚನಗಳ ಫಲಕಗಳನ್ನು ಅಳವಡಿಸಿ ಕನ್ನಡದ ಕಂಪು ಸೂಸುವಂತೆ ಮಾಡಲಾಗಿದೆ.

ಕಚೇರಿ ಉದ್ಘಾಟನೆಯ ನಂತರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನೆನಪಿಸಲಿ ಶ್ರೀಗಂಧದ ಗಿಡವನ್ನು ನೆಟ್ಟಿ ನೀರೆರೆದರು.

ಕಾರ್ಯಕ್ರಮದಲ್ಲಿ‌ ಮಂಡ್ಯ ಶಾಸಕ ಪಿ.ರವಿಕುಮಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಜಿಲ್ಲಾಧಿಕಾರಿ ಡಾ; ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ,ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Tags:
error: Content is protected !!