ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕರೀಘಟ್ಟ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ಇಂದು ವೈಭವದಿಂದ ನಡೆಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತ ಇರುವ ಹಳ್ಳಿಗಳಿಂದ ಸಹಸ್ರಾರು ಭಕ್ತರು ಆಗಮಿಸಿ ಸ್ವಾಮಿಯ ರಥೋತ್ಸವಕ್ಕೆ ಬಾಳೆ ಹಣ್ಣು ಜವನ ಎಸೆದು ಸ್ವಾಮಿಯ ಕೃಪೆಗೆ ಪಾತ್ರರಾದರು.
ಒಂಭತ್ತು ದಿನಗಳ ಕಾಲ ನಡೆಯುವ ಕರೀಘಟ್ಟ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವ ಕಳೆದ ಫೆಬ್ರವರಿ.28ರಿಂದ ನಡೆಯುತ್ತಿದ್ದು, ಪ್ರತಿ ನಿತ್ಯ ನಿತ್ಯಾರಾಧನೆ, ಮಂಗಳ ಸ್ವಪನ ಮಹಾ ಮಂಗಳಾರತಿ, ಹಂಸವಾಹನ ನಡೆಯುತ್ತಿದೆ. ಅದೇ ರೀತಿ ಇಂದು ಆರನೇ ದಿನ ವೆಂಕಟರಮಣ ಸ್ವಾಮಿಯ ಬ್ರಹ್ಮೋತ್ಸವ ವೈಭವದಿಂದ ಜರುಗಿತು.
ಬಿಸಿಲಿನಲ್ಲಿ ಬ್ರಹ್ಮೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಮಜ್ಜಿಗೆ, ಪಾನಕ ವಿತರಣೆ ಮಾಡಲಾಗಿದ್ದು, ಮಧ್ಯಾಹ್ನ ಪ್ರಸಾದವನ್ನು ಸಹ ನೀಡಲಾಯಿತು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…