ಮಂಡ್ಯ

ಕರ್ನಾಟಕ ಬಂದ್‌: ಸಕ್ಕರೆ ನಾಡು ಮಂಡ್ಯದಲ್ಲಿ ಅಂಗಡಿ ಮುಂಗಟ್ಟು ಬಂದ್‌

ಮಂಡ್ಯ: ಕನ್ನಡಿಗರ ಮೇಲೆ ಮರಾಠಿ ಪುಂಡರ ಹಲ್ಲೆ ಖಂಡಿಸಿ ಇಂದು ಹಲವಾರು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಕರ್ನಾಟಕ ಬಂದ್‌ಗೆ ಅಲ್ಲಲ್ಲಿ ಬೆಂಬಲ ವ್ಯಕ್ತವಾಗಿದ್ದು, ಮಂಡ್ಯದ ಆರ್‌ಪಿ ರಸ್ತೆಯಲ್ಲಿ ಅಂಗಡಿಗಳನ್ನ ಬಂದ್‌ ಮಾಡಿ ಮಾಲೀಕರು ಕೂಡ ಪ್ರತಿಭಟನೆ ನಡೆಸಿದರು. ಮತ್ತೊಂದು ಕಡೆ ಮಂಡ್ಯದ ಸಂಜಯ ಸರ್ಕಲ್‌ನಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮುಂದುವರಿದಿದ್ದು, ಮರಾಠಿಗರ ವಿರುದ್ಧ ಆಕ್ರೋಶದ ಕೂಗು ಕೇಳಿಬರುತ್ತಿದೆ.

ಇನ್ನು ಬಂದ್‌ಗೆ ಕೆಎಸ್‌ಆರ್‌ಟಿಸಿ ನೌಕರರು ಕೂಡ ಸಾಥ್‌ ನೀಡಿದ್ದು, ರಸ್ತೆಯಲ್ಲೇ ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಸಂಜಯ ವೃತ್ತದಲ್ಲಿ ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲೇ ಕೆಎಸ್‌ಆರ್‌ಟಿಸಿ ಬಸ್ ನಿಲ್ಲಿಸಿ ಚಾಲಕ ಹಾಗೂ ನಿರ್ವಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ನಮ್ಮ ಪರವಾಗಿ ಸಂಘಟನೆಗಳು ಬಂದ್ ಮಾಡ್ತಾ ಇವೆ. ಮಹಾರಾಷ್ಟ್ರ ಕಡೆ ಹೋದಾಗ ನಮ್ಮ ಮೇಲೂ ಹಲ್ಲೆ ಆಗಬಹುದು. ಮಹಾರಾಷ್ಟ್ರ ಪೊಲೀಸರು ಅವರಿಗೆ ಸಪೋರ್ಟ್ ಆಗಿ ಇದ್ದಾರೆ. ನಮ್ಮ‌ ಮೇಲೆ ಹಲ್ಲೆ ಮಾಡಿರುವವರಿಗೆ ನಾವು ನುಗ್ಗಿ ಹೊಡೆಯಬೇಕು. ನಮ್ಮ ಪರ ಹೋರಾಟ ಮಾಡುತ್ತಿರುವವರಿಗೆ ಧನ್ಯವಾದಗಳು ಎಂದು ನಿರ್ವಾಹಕರು ಹಾಗೂ ಚಾಲಕರು ಮರಾಠಿಗ ಪುಂಡರ ವಿರುದ್ಧ ಕಿಡಿಕಾರಿದರು.

ಇನ್ನು ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಕನ್ನಡ ಪರ, ರೈತ ಪರ ಹೋರಾಟಗಾರು ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿದರು. ಸಂಜಯ ವೃತ್ತದಿಂದ, ಹೊಳಲು ವೃತ್ತ, ಪೇಟೆ ಬೀದಿ, ವಿವಿ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಬಂದ್‌ಗೆ ಬೆಂಬಲ ಸೂಚಿಸಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

7 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

10 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

10 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

11 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

11 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

11 hours ago