Mysore
27
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

ಕರ್ನಾಟಕ ಸಂಭ್ರಮ – 50 ರ ಜ್ಯೋತಿ ರಥಯಾತ್ರೆಗೆ ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ

ಮಂಡ್ಯ:ಕರ್ನಾಟಕ ರಾಜ್ಯಕ್ಕೆ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ 50 ರ ಸಂಭ್ರಮದ ಕನ್ನಡದ ಜ್ಯೋತಿ ರಥವನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಸಂಚರಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೂಡ ಕನ್ನಡ ರಥವು ಸಂಚರಿಸಿ ಮಂಡ್ಯ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಗೌರವಯುತವಾಗಿ ಸ್ವಾಗತ ನೀಡಿದರು.

ಬಳಿಕ ಮಾತನಾಡಿದ ಅವರು, ಕನ್ನಡ ರಥವನ್ನು ಸ್ವಾಗತಿಸಿದ್ದೇವೆ. ನಾವೆಲ್ಲರೂ ಕೂಡ ನಾಡು, ನುಡಿಯ ಬಗ್ಗೆ ಅಭಿಮಾನವನ್ನು ಇಟ್ಟುಕೊಂಡು ಪ್ರತಿಯೊಬ್ಬರೂ ಕೂಡ ನಮ್ಮ ಸಂಸ್ಕೃತಿಯನ್ನ, ಕನ್ನಡ ನಾಡು-ನುಡಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷೆ ಡಾ ಮೀರಾಶಿವಲಿಂಗಯ್ಯ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ ಜಯಪ್ರಕಾಶ್ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ನಗರಘಟಕದ ಅಧ್ಯಕ್ಷೆ ಸುಜಾತ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳಾದ ಸುಜಾತ ಮಣಿ, ಧನಂಜಯ ದಾರಸಗುಪ್ಪೆ, ಚಂದ್ರಲಿಂಗು, ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: