ಮಂಡ್ಯ:ಕರ್ನಾಟಕ ರಾಜ್ಯಕ್ಕೆ 50 ವರ್ಷಗಳು ಸಂದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದಿಂದ ಕರ್ನಾಟಕ 50 ರ ಸಂಭ್ರಮದ ಕನ್ನಡದ ಜ್ಯೋತಿ ರಥವನ್ನು ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿಯೂ ಕೂಡ ಸಂಚರಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಕೂಡ ಕನ್ನಡ ರಥವು ಸಂಚರಿಸಿ ಮಂಡ್ಯ ಜಿಲ್ಲಾ ಕೇಂದ್ರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಗೌರವಯುತವಾಗಿ ಸ್ವಾಗತ ನೀಡಿದರು.
ಬಳಿಕ ಮಾತನಾಡಿದ ಅವರು, ಕನ್ನಡ ರಥವನ್ನು ಸ್ವಾಗತಿಸಿದ್ದೇವೆ. ನಾವೆಲ್ಲರೂ ಕೂಡ ನಾಡು, ನುಡಿಯ ಬಗ್ಗೆ ಅಭಿಮಾನವನ್ನು ಇಟ್ಟುಕೊಂಡು ಪ್ರತಿಯೊಬ್ಬರೂ ಕೂಡ ನಮ್ಮ ಸಂಸ್ಕೃತಿಯನ್ನ, ಕನ್ನಡ ನಾಡು-ನುಡಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷೆ ಡಾ ಮೀರಾಶಿವಲಿಂಗಯ್ಯ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಬಿ ಜಯಪ್ರಕಾಶ್ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ನಗರಘಟಕದ ಅಧ್ಯಕ್ಷೆ ಸುಜಾತ ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರುಗಳಾದ ಸುಜಾತ ಮಣಿ, ಧನಂಜಯ ದಾರಸಗುಪ್ಪೆ, ಚಂದ್ರಲಿಂಗು, ನಾರಾಯಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…