ಮಂಡ್ಯ

ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಕೇಂದ್ರ ಸರ್ಕಾರ ತೆರಿಗೆ ಹಣ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದ್ರೋಹವೆಸಗಿ ಮಲತಾಯಿ ಧೋರಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯಲ್ಲಿ ಇಂದು ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯನ್ನು ಚಾಲನೆ ನೀಡಿದ ನಂತರ ಮಾತನಾಡಿದ ಅವರು ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ತೆರಿಗೆ ಹಣ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಮತ್ತು ಜೆಡಿಎಸ್‌ ಸಂಸದರು ಯಾರಾದರೂ ಸರಿಯೇ ಕೇಂದ್ರದ ವಿರುದ್ಧ ಬಾಯಿ ಬಿಡಲ್ಲ. ಅಲ್ಲದೇ ಕೇಂದ್ರ ಸರ್ಕಾರ ಮೇಕೆದಾಟು, ಮಹಾದಾಯಿ ಯೋಜನೆ ಹಾಗೂ ತುಂಗಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕ್ಲೀಯರೆನ್ಸ್‌ ನೀಡದೆ ಅನುದಾನವನ್ನು ಹಿಡಿದಿಟ್ಟುಕೊಂಡರೂ ಸಹ ಸಂಸತ್‌ ಅಧಿವೇಶನದ ಸಂದರ್ಭದಲ್ಲಿ ಕರ್ನಾಟಕದ ಸಂಸದರು ಮೌನವಾಗಿರುತ್ತಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯಗಳ ಅಭಿವೃದ್ಧಿ ವಿಚಾರಕ್ಕೆ ಬಂದರೆ ಕರ್ನಾಟಕಕ್ಕಿಂತ ಹಿಂದಿರುವ ಉತ್ತರ ಭಾರತದ ಅನೇಕ ರಾಜ್ಯಗಳಿಗೆ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅಧಿಕ ಅನುದಾನವನ್ನು ಬಿಡುಗಡೆ ಮಾಡುತ್ತದೆ ಎಂದು ಆರೋಪಿಸಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಸಂದಾಯ ಮಾಡುವ ಸಾಲಿನಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದೆ. ಆದರೆ ಕೇಂದ್ರ ಸರ್ಕಾರ ಪ್ರತಿಬಾರಿಯೂ ನಮ್ಮ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿದೆ ಎಂದು ಹೇಳಿದರು.

 

ಅರ್ಚನ ಎಸ್‌ ಎಸ್

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

1 hour ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

2 hours ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

2 hours ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

2 hours ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

11 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

13 hours ago