ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ ತಂಡ ಅವರ ಪತ್ನಿಯಿಂದ ಮಾಹಿತಿ ಪಡೆದುಕೊಂಡಿತು.
ಸಿಐಡಿ ಡಿವೈಎಸ್‌ಪಿ ಉಮೇಶ್ ಹಾಗೂ ಸಬ್‌ಇನ್‌ಸ್ಪೆಕ್ಟರ್ ದೇವರಾಜ್ ಅವರು ಕತ್ತರಘಟ್ಟ ಗ್ರಾಮಕ್ಕೆ ತೆರಳಿ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದಿದ್ದು, ಇವರಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಜಯಕುಮಾರ್ ಅವರ ಸಾವು ಪ್ರಕರಣದಲ್ಲಿ ಸ್ಥಳೀಯ ಪೊಲೀಸರ ನಿರ್ಲಕ್ಷ ವಿದೆ ಎಂದು ದಲಿತ, ಪ್ರಗತಿಪರ ಸಂಘಟನೆಗಳು ಆರೋಪಿಸಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದವು.
ದಲಿತ ಯುವಕ ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಸಜೀವವಾಗಿ ಸುಟ್ಟು ಹಾಕಿರುವ ಆರೋಪವಿದೆ. ಜಯಕುಮಾರ್ ಅವರ ಜಮೀನಿನಲ್ಲಿ ಅನಿಲ್ ಕುಮಾರ್ ಎಂಬವರು ಐದಾರು ವರ್ಷಗಳಿಂದ ಅಕ್ರಮವಾಗಿ ಹುಲ್ಲಿನ ಮೆದೆ ಹಾಕಿದ್ದಲ್ಲದೆ ಮಾನಸಿಕವಾಗಿ, ದೈಹಿಕವಾಗಿ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಮೇ ೧೬ರಂದು ಜಯಕುಮಾರ್ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಅನಿಲ್ ಕುಮಾರ್ ವಿರುದ್ಧ ದೂರು ನೀಡಿದ್ದರು.
ಮರುದಿನವೇ ಅವರನ್ನು ಜಯಕುಮಾರ್ ಅವರನ್ನು ಹುಲ್ಲಿನ ಮೆದೆಗೆ ತಳ್ಳಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪ್ರಸ್ತುತ ಆರೋಪಿ ಸ್ಥಾನದಲ್ಲಿರುವ ಅನಿಲ್ ಕುಮಾರ್ ನ್ಯಾಯಾಂಗ ಬಂಧನಲ್ಲಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…