ಮಂಡ್ಯ: ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ಐದನೇ ಹಂತದ ಯೋಜನೆಗೆ ಚಾಲನೆ ನೀಡಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಈ ಯೋಜನೆ ಚಾಲನೆ ಬಳಿಕ ದಶಕದ ಕನಸಿನ ಯೋಜನೆಗೆ ಮರುಜೀವ ಸಿಕ್ಕಂತಾಗಿದ್ದು, 4336 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ನಿರ್ಮಿಸಲಾಗಿದೆ.
ಈ ಯೋಜನೆಯಿಂದ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ.
ಈ ಹಿನ್ನೆಲೆಯಲ್ಲಿ ಯೋಜನೆಯಿಂದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಸಿಕ್ಕಿದಂತಾಗಿದೆ.