ಮಂಡ್ಯ

ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಂಡ್ಯ: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು, ಕಾವೇರಿ ಐದನೇ ಹಂತದ ಯೋಜನೆಗೆ ಚಾಲನೆ ನೀಡಿದರು.

ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಚಲುವರಾಯಸ್ವಾಮಿ, ಶಾಸಕ ನರೇಂದ್ರಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ಯೋಜನೆ ಚಾಲನೆ ಬಳಿಕ ದಶಕದ ಕನಸಿನ ಯೋಜನೆಗೆ ಮರುಜೀವ ಸಿಕ್ಕಂತಾಗಿದ್ದು, 4336 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ನಿರ್ಮಿಸಲಾಗಿದೆ.

ಈ ಯೋಜನೆಯಿಂದ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಬಹುದಾಗಿದೆ.

ಈ ಹಿನ್ನೆಲೆಯಲ್ಲಿ ಯೋಜನೆಯಿಂದ ಬೆಂಗಳೂರಿಗರಿಗೆ ಸಿಹಿ ಸುದ್ದಿ ಸಿಕ್ಕಿದಂತಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

10 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

24 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

55 mins ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

3 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

4 hours ago