Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕಾವೇರಿ ಆರತಿಗೆ 92 ಕೋಟಿ ರೂ. ಅನುದಾನ: ಸಿಎಂಗೆ ಅಭಿನಂದನೆ ಸಲ್ಲಿಸಿದ ಶಾಸಕ ದಿನೇಶ್ ಗೂಳಿಗೌಡ

ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಶಾಸಕ ದಿನೇಶ್‌ ಗೂಳಿಗೌಡ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ದೇಶದ ಪುಣ್ಯ ನದಿಗಳಲ್ಲಿ ಕಾವೇರಿಯೂ ಒಂದು. ಅತ್ಯಂತ ಶ್ರೇಷ್ಠವಾದ ತಾಯಿ ಕಾವೇರಿಗೆ ಪೂಜೆ ಸಲ್ಲಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲಿ ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಎಲ್ಲ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಇಂದಿನ ಸಚಿವ ಸಂಪುಟವು 92 ಕೋಟಿ ರೂಪಾಯಿಗೆ ಅನುಮೋದನೆಯನ್ನು ನೀಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇನ್ನು ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವ ಸಂಬಂಧ ಈ ಹಿಂದೆ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮನವಿ ಮಾಡಿದ್ದನ್ನು ಸ್ಮರಿಸಬಹುದು.

Tags:
error: Content is protected !!