ಮಂಡ್ಯ: ಕಾವೇರಿ ಮಾತೆಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸುವ ಸಂಬಂಧ ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟದಲ್ಲಿ 92 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಶಾಸಕ ದಿನೇಶ್ ಗೂಳಿಗೌಡ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದೇಶದ ಪುಣ್ಯ ನದಿಗಳಲ್ಲಿ ಕಾವೇರಿಯೂ ಒಂದು. ಅತ್ಯಂತ ಶ್ರೇಷ್ಠವಾದ ತಾಯಿ ಕಾವೇರಿಗೆ ಪೂಜೆ ಸಲ್ಲಿಸಲು ಈ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ. ಅಲ್ಲಿ ಕಾವೇರಿ ಆರತಿಗೆ ಸಂಬಂಧಪಟ್ಟಂತೆ ಎಲ್ಲ ಮೂಲಭೂತ ಸೌಕರ್ಯವನ್ನು ಕಲ್ಪಿಸಲು ಇಂದಿನ ಸಚಿವ ಸಂಪುಟವು 92 ಕೋಟಿ ರೂಪಾಯಿಗೆ ಅನುಮೋದನೆಯನ್ನು ನೀಡಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಇನ್ನು ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವ ಸಂಬಂಧ ಈ ಹಿಂದೆ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮನವಿ ಮಾಡಿದ್ದನ್ನು ಸ್ಮರಿಸಬಹುದು.
ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು…
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನ ಗಣನೀಯವಾಗಿ ಏರಿಕೆಯಾಗಲಿದೆ…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಟೆಹರಾನ್: ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್…
ಟಿ.ನರಸೀಪುರ: ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…